ಅಮೃತ ಭಾರತಿ ವಿದ್ಯಾಲಯದಲ್ಲಿ ವಿವೇಕಾನಂದರ ಜಯಂತಿ ಆಚರಣೆ.

Date:

spot_img

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು . ಮುಖ್ಯ ಅತಿಥಿಗಳಾಗಿ ಅಮೃತ ಭಾರತಿ ವಿದ್ಯಾಕೇಂದ್ರದ ಹಿಂದಿ ಭಾಷಾ ಶಿಕ್ಷಕ ಲವ ಮಾತನಾಡಿ, ವಿವೇಕಾನಂದರು ಬಾಲ್ಯದಲ್ಲಿ ತಾಯಿಯಿಂದ ಉತ್ತಮ ಸಂಸ್ಕಾರ, ಅಧ್ಯಾತ್ಮದ ಸೆಳೆತದಿಂದ ಗುರುಗಳಾದ ರಾಮಕೃಷ್ಣ ಪರಮಹಂಸರಿಂದ ಉತ್ತಮ ಧಾರ್ಮಿಕ ವಿಚಾರಗಳನ್ನು ತಿಳಿದುಕೊಂಡು ಆದರ್ಶ ವ್ಯಕ್ತಿಗಳಾಗಿ ರೂಪುಗೊಂಡರು ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ನ ಸದಸ್ಯರಾದ ಬಾಲಕೃಷ್ಣ ಮಲ್ಯ ವಹಿಸಿ ಮಾತನಾಡಿ ಭಾರತ ಭೋಗ ಭೂಮಿ ಅಲ್ಲ, ತ್ಯಾಗ ಭೂಮಿ ನಾವು ಅದರಂತೆ ಬದುಕಬೇಕು ಇಲ್ಲಿನ ಸಾಧಕರ ಜೀವನ ಚರಿತ್ರೆ ನಮ್ಮದಾಗಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ಗುರುವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು . ವಿವೇಕಾನಂದರ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರೌಢಶಾಲೆಯ ಮೀನಾಕ್ಷಿ ವಾಚಿಸಿದರು. ಪುಟಾಣಿ ವಿದ್ಯಾರ್ಥಿಗಳು ವಿವೇಕಾನಂದರ ವೇಷ ಧರಿಸಿದ್ದರು. ವಿದ್ಯಾರ್ಥಿಗಳಾದ ಸ್ಮಿತಿ ಸ್ವಾಗತಿಸಿ, ಆರಾಧ್ಯ ನಿರೂಪಿಸಿ, ಅವನಿ ವಂದಿಸಿದರು .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.