spot_img

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಜಾವೀದ್ ಪಾಷಾಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆ!

Date:

spot_img

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮೆಹದಿ ನಗರದ ಜಾವೀದ್ ಪಾಷ (34) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ಕಿರುಗಾವಲು ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ತಮ್ಮ ಬಂಧನವನ್ನು ಅಕ್ರಮ ಎಂದು ಘೋಷಿಸಬೇಕು ಎಂದು ಕೋರಿ ಜಾವೀದ್ ಪಾಷ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತು ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ: ಜಾವೀದ್ ಪಾಷ ಅವರು 2025ರ ಮೇ 8ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ, ಎಐ ತಂತ್ರಜ್ಞಾನದ ಮೂಲಕ ವಿರೂಪಗೊಳಿಸಲಾದ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಮತ್ತು ಕೆಲವು ಪದಗಳನ್ನು ಬಳಸಿದ ಅವಹೇಳನಕಾರಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಕಿರುಗಾವಲಿನ ಮಹೇಶ್ ಅವರು ಮೇ 9ರಂದು ಕಿರುಗಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ-1860ರ ಕಲಂ 152, 192 ಮತ್ತು 340ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ನಂತರ ಜಾವೀದ್ ಪಾಷ ಅವರನ್ನು ಬಂಧಿಸಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಾರವಾರದಲ್ಲಿ ಎನ್‌ಐಟಿಕೆಯ ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ.

ಮೋದಿ ಆಳ್ವಿಕೆಯಲ್ಲಿ ಹೊಸ ಇತಿಹಾಸ: ಇಂದಿರಾ ಗಾಂಧಿಯವರ ದಾಖಲೆ ಮುರಿದು ದೇಶದ 2ನೇ ದೀರ್ಘಾವಧಿ ಪ್ರಧಾನಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಎರಡನೇ ಅತಿ ದೀರ್ಘಾವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮಹತ್ವದ ದಾಖಲೆಯನ್ನು ಮಾಡಿದ್ದಾರೆ.

ದಿನ ವಿಶೇಷ – ಡಾ. ಎಪಿಜೆ ಅಬ್ದುಲ್ ಕಲಾಂ ಸ್ಮರಣಾರ್ಥ ದಿನ

ಜುಲೈ 27 ರಂದು ಆಚರಿಸಲಾಗುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸ್ಮರಣಾರ್ಥ ದಿನವು ಭಾರತದ ಮಾಜಿ ರಾಷ್ಟ್ರಪತಿ ಮತ್ತು ಮಹಾನ್ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಾಗಿದೆ