ಹಿಂದೂ ಮುಖಂಡ ಭರತ್ ಕುಮ್ಡೇಲುಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ

Date:

spot_img

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲು ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಸಂದೇಶವೊಂದು ಹರಿದಾಡಿದ್ದು, ಆತಂಕ ಮೂಡಿಸಿದೆ.

ಇತ್ತೀಚೆಗಷ್ಟೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ. ಈ ಹತ್ಯೆಯ ನಂತರ ಅನೇಕ ಹಿಂದೂ ಮುಖಂಡರು ಟಾರ್ಗೆಟ್ ಆಗುತ್ತಿರುವ ಶಂಕೆ ಮೂಡಿದ ಹಿನ್ನೆಲೆ, ಭರತ್ ಕುಮ್ಡೇಲು ಅವರು ತಮಗೆ ಬಂದ ಬೆದರಿಕೆಯ ಕುರಿತು ಮಾಹಿತಿ ನೀಡಿದ ನಂತರ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೊಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ “ಆನ್ ಫಿಕ್ಸ್ ಲೀಡರ್” ಎಂಬ ಖಾತೆಯಿಂದ, ಭರತ್ ಅವರನ್ನು ಕೆಟ್ಟ ಹೆಸರಿಗೆ ದೂಡಲು ಹಾಗೂ ಆತಂಕ ಸೃಷ್ಟಿಸಲು ಪೋಸ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯ ಸ್ಪೆಷಲ್ ಬ್ರಾಂಚ್‌ನಲ್ಲಿ ಕರ್ತವ್ಯದಲ್ಲಿರುವ ಎಎಸ್‌ಐ ಕೃಷ್ಣ ನಾಯ್ಕ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಪೋಸ್ಟ್ ಮಾಡುವ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಹಾಗೂ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮಧ್ಯೆ, ಹಿಂದೂ ಮುಖಂಡರಿಗೆ ಭದ್ರತೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.