
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ )ಉಡುಪಿ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಕುತ್ಪಾಡಿ, ಉಡುಪಿ, ರೋಟರಿ ಕ್ಲಬ್ ಮಣಿಪಾಲ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಹಿರಿಯಡ್ಕ ವಲಯ ಇವರ ಸಹಯೋಗದೊಂದಿಗೆ ಹಿರಿಯಡ್ಕದಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತಿಯ ಪ್ರಯುಕ್ತ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ SDM ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ನುರಿತ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೈಮರಿ ವಿಭಾಗ ಹಿರಿಯಡ್ಕ ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಶ್ರೀ ಉಮೇಶ್ ಶೆಟ್ಟಿ ಸದಸ್ಯರು ಗ್ರಾಮ ಪಂಚಾಯಿತಿ ಬೊಮ್ಮರಬೆಟ್ಟು ಹಿರಿಯಡ್ಕ ಹಾಗೂ ಜಿಲ್ಲಾ ಜನ ಜಾಗ್ರತಿ ವೇದಿಕೆ ಸದಸ್ಯರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ. ಶಶಿಕಲಾ ರಾಜವರ್ಮ ಅಧ್ಯಕ್ಷರು ರೋಟರಿ ಕ್ಲಬ್ ಮಣಿಪಾಲ ಇವರು ವಹಿಸಿಕೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಸಹನಾ ರವರು ಸ್ತ್ರೀರೋಗಗಳ ಬಗ್ಗೆ, ಮಾನಸಿಕ ಆರೋಗ್ಯದ ಬಗ್ಗೆ, ಹೆಚ್ಚುತ್ತಿರುವ ಹೃದಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ, ಶ್ರೀ ಸುರೇಂದ್ರ ನಾಯ್ಕ್, ಕ್ಷೇತ್ರ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ )ಉಡುಪಿ ತಾಲೂಕು, ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಅಧ್ಯಕ್ಷರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಶ್ರೀ ಬಿ ಎಲ್ ವಿಶ್ವಾಸ್ ಭಟ್ ಉಪಾಧ್ಯಕ್ಷರು ಶಾಲಾ ಅಭಿವೃದ್ಧಿ ಸಮಿತಿ ಕೆಪಿಎಸ್ ಹಿರಿಯಡ್ಕ, ಶ್ರೀ ಗಣೇಶ್ ನಾಯ್ಕ್ ವಲಯದಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಹಿರಿಯಡ್ಕ ವಲಯ, ಅಶೋಕ್ ಜೋಗಿ ಅಧ್ಯಕ್ಷರು ಅನ್ನದಾಸೋಹ ಸಮಿತಿ ಹಾಗೂ ಸದಸ್ಯರು SDMC, ಕೆ ಪಿ ಎಸ್ ಹಿರಿಯಡ್ಕ, ಶ್ರೀಮತಿ ನಳಿನಾ ದೇವಿ ಸದಸ್ಯರು ಜಿಲ್ಲಾ ಜನ ಜಾಗೃತಿ ವೇದಿಕೆ ಉಡುಪಿ ತಾಲೂಕು, ಉಪಸ್ಥಿತರಿದ್ದರು. ಶಿಬಿರದಲ್ಲಿ ಎಲ್ಲಾ ಕಾಯಿಲೆಗಳಿಗೆ ಉಚಿತ ತಪಾಸಣೆ ನಡೆಸಿ, ಸೂಕ್ತ ಸಲಹೆ ಹಾಗೂ ಮೂರು ದಿನದ ಉಚಿತ ನೀಡಲಾಯಿತು. ವಿಶೇಷವಾಗಿ ಅಗತ್ಯವಿರುವ ಶಿಬಿರಾರ್ಥಿಗಳಿಗೆ ECG. ತಪಾಸಣೆ ನಡೆಸಲಾಯಿತು.