ಹಿರಿಯಡಕ-ಪೆರ್ಡೂರು ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು

Date:

spot_img

ಹಿರಿಯಡಕ – ಪೆರ್ಡೂರು – ಹೆಬ್ರಿ ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಇಲಾಖಾಧಿಕಾರಿಗಳೊಂದಿಗೆ ಕೊಡಿಬೆಟ್ಟು, ಹಿರಿಯಡಕ, ಪೆರ್ಡೂರು ಭಾಗದಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಕೆಲದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಸಮರ್ಪಕ ಚರಂಡಿಯಿಂದ ಮನೆಗಳಿಗೆ ನೀರು ನುಗ್ಗಿದ್ದು ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥಿತವಾದ ಚರಂಡಿಯನ್ನು ತಕ್ಷಣವೇ ನಿರ್ಮಿಸುಂತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕಿರು ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಶೀಘ್ರವೇ ದುರಸ್ತಿ ಗೊಳಿಸುವಂತೆ ಶಾಸಕರು ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ ಕೆ, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರರಾದ ಮಂಜುನಾಥ್ ನಾಯಕ್ ಹಾಗೂ ಕೊಡಿಬೆಟ್ಟು, ಬೊಮ್ಮರಬೆಟ್ಟು, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.