
ಹಿರಿಯಡಕ : ಇಲ್ಲಿನ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ (ICSE) 10 ನೇ ತರಗತಿ ಪರೀಕ್ಷೆಯಲ್ಲಿ ಸತತವಾಗಿ ಇಪ್ಪತ್ತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿ ಗಳಲ್ಲಿ 32 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣ ರಾಗಿರುತ್ತಾರೆ.
ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಸಂತೋಷ್ ಶೆಟ್ಟಿ ಯವರು 570 ಅಂಕಗಳನ್ನು ಗಳಿಸಿ ಶಾಲೆಗೆ ಟಾಪರ್ ಆಗಿರುತ್ತಾರೆಂದು ಪ್ರಾಂಶುಪಾಲೆ ಕ್ಲಾರಿನ್ ನಿಕೋಲಸ್ ತಿಳಿಸಿರುತ್ತಾರೆ.