ಉಡುಪಿ: ಹಿರಿಯಡ್ಕ ನಿವಾಸಿ ನಿಖಿಲ್ ದೇವಾಡಿಗ (26) ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.ಯುವಕನ ಹಠಾತ್ ಮರಣವು ಕುಟುಂಬ ಮತ್ತು ಸ್ನೇಹಿತರ ವಲಯದಲ್ಲಿ ತೀವ್ರ ದುಃಖ ಮೂಡಿಸಿದೆ. ನಿಖಿಲ್ ಅವರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.