ಹಿರಿಯಡ್ಕದಲ್ಲಿ “ಗಾಂಧಿ ಭಾರತ ಬೃಹತ್ ಸಮಾವೇಶ”

Date:

spot_img

ಉಡುಪಿ: 100 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧೀಜಿ ಭಾಗವಹಿಸಿದ್ದ ಸವಿನೆನಪಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧ್ಯೇಯವಾಕ್ಯದಡಿ “ಗಾಂಧಿ ಭಾರತ ಬೃಹತ್ ಸಮಾವೇಶ”ವನ್ನು ಜ. 30ರಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನೀಡಿದ ಮಾಹಿತಿ :
ಅಂದು ಮಧ್ಯಾಹ್ನ 3 ಗಂಟೆಗೆ ವಿಧಾನಸಭೆ ಸಭಾಪತಿ ಯು.ಟಿ. ಖಾದರ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಜಯಂತ ರಾವ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಉಮಾಶ್ರೀ, ವಕ್ತಾರ ನಿಕೇತ್ ರಾಜ್ ಮೌರ್ಯ, ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಸುಧೀರ್ ಮರೋಳಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಮಾರು 5 ಸಾವಿರ ಮಂದಿ ಸೇರುವ ನಿರೀಕ್ಷೆ ಇದ್ದು, ಸಭಾಕಾರ್ಯಕ್ರಮಕ್ಕೂ ಮೊದಲು ದೇವಾಡಿಗ ಸಭಾಭವನದಿಂದ ಸಮಾವೇಶ ಸ್ಥಳದವರೆಗೆ ಮೆರವಣಿಗೆ ನಡೆಸಲಾಗುವುದು ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದವರು:
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಸಮಾವೇಶದ ಸಂಚಾಲಕ ನಾಗೇಶ ಉದ್ಯಾವರ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ನಿತಿನ್ ಮತ್ತು ನವೀನ ಚಂದ್ರ ಸುವರ್ಣ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.