
2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಹಿರಿಯಡ್ಕದ ಸರಕಾರಿ ಪದವಿ ಪೂರ್ವ ಕಾಲೇಜಿನ 368 ವಿದ್ಯಾರ್ಥಿಗಳಲ್ಲಿ 316 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ಅವರಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 197 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 60 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 21 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಶ್ರಾವಿ ಶೆಟ್ಟಿ 588 ಅಂಕ ಗಳಿಸಿ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಆಶಿಶ್ ಶೆಟ್ಟಿ 579 ಅಂಕ ಗಳಿಸಿ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.
ಕಲಾ ವಿಭಾಗದಲ್ಲಿ ಬಾಲಗೌಡ 543 ಅಂಕ ಗಳಿಸಿ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಬಿ. ಎಲ್ ವಿಶ್ವಾಸ್ ಅಧ್ಯಕ್ಷರು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವೃಂದದವರು ಸಂತಸ ವ್ಯಕ್ತಪಡಿಸಿ, ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.