
ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ, ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಮೋಘ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಈ ಪಂದ್ಯಾಟದಲ್ಲಿ ಜಿಲ್ಲೆಯ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿರುವ ಅಮೋಘ, 50 ಕೆ.ಜಿ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದರು.
ಅಮೋಘ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ , ಪ್ರಾಂಶುಪಾಲರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗವು ಅಮೋಘ ಅವರನ್ನು ಅಭಿನಂದಿಸಿದ್ದು, ರಾಜ್ಯಮಟ್ಟದ ಪಂದ್ಯಾಟದಲ್ಲೂ ಯಶಸ್ಸು ಗಳಿಸಲು ಶುಭ ಹಾರೈಸಿದ್ದಾರೆ. ಅಮೋಘ ಅವರ ಯಶಸ್ಸು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಲಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.