
ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಪ್ರೆಸ್ ಕ್ಲಬ್ ನೀಡಲಿದ್ದು, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಈ ಮಾನ್ಯತೆ ನೀಡಲಾಗುತ್ತಿದೆ.
ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟಿ ಶೃತಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.