
ಹಿರಿಯಡ್ಕ: ಕರಾಟೆ ಕ್ರೀಡೆಯಲ್ಲಿ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಸ್ಮಯ ಅಕಾಡೆಮಿಯವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕರ್ನಾಟಕ-ಗೋವಾ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಾರ್ವಣಿ ಕಂಚಿನ ಪದಕ ಪಡೆದಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ 5 ಪದಕಗಳ ಸಾಧನೆ
ಅಲ್ಲದೆ, ಶಿವಮೊಗ್ಗದಲ್ಲಿ ನಡೆದ 8 ರಾಷ್ಟ್ರಗಳನ್ನೊಳಗೊಂಡ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಶಾಲೆಯ ಇತರ ವಿದ್ಯಾರ್ಥಿಗಳು ಮಿಂಚಿದ್ದಾರೆ. ವಿದ್ಯಾರ್ಥಿಗಳಾದ ಅಂಶುಲ್ ಯು ಪೂಜಾರಿ, ಶ್ರೇಷ್ಟ್ ಶೆಟ್ಟಿ ಮತ್ತು ಸಾನ್ವಿ ನಾಯಕ್ ಸೇರಿ ಒಟ್ಟು 2 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.
ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರಿಂದ ಅಭಿನಂದನೆ
ಕರಾಟೆ ಶಿಕ್ಷಕರಾದ ರೆನ್ಶಿ ರಘುರಾಜ್ ಪಣಿಯಾಡಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಪ್ರಾಂಶುಪಾಲೆ ಕ್ಲಾರಿನ್ ನಿಕೋಲಸ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.