ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ HIV/AIDS ಜಾಗೃತಿ ಕಾರ್ಯಕ್ರಮ

Date:

spot_img

ಹಿರಿಯಡ್ಕ : ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್‌ನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗ ಹಾಗೂ 5ನೇ ಸೆಮಿಸ್ಟರ್ ಬಿ.ಎಸ್‌.ಸಿ. ನರ್ಸಿಂಗ್ ವಿದ್ಯಾರ್ಥಿಗಳು ಇಂದು ಕರ್ನಾಟಕ ಪಬ್ಲಿಕ್ ಶಾಲೆ (ಸರ್ಕಾರಿ ಪಿಯು ಕಾಲೇಜು), ಹಿರಿಯಡ್ಕದಲ್ಲಿ ‘ಶಾಲಾ ಆರೋಗ್ಯ ಕಾರ್ಯಕ್ರಮ’ದ ಅಂಗವಾಗಿ HIV/AIDS ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಾರ್ಯಕ್ರಮದ ಉದ್ದೇಶ ಮತ್ತು ಸಂದೇಶ

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಕ್ಲಾರಾ ಡಿಸೋಜ ಮಾತನಾಡಿ, ವಿದ್ಯಾರ್ಥಿಗಳಲ್ಲಿ HIV/AIDS ಬಗ್ಗೆ ಅರಿವು ಮೂಡಿಸುವುದು, ಅದರ ತಡೆಗಟ್ಟುವಿಕೆ, ಮೂಢನಂಬಿಕೆ ನಿವಾರಣೆ ಮತ್ತು ಆರೋಗ್ಯ ಜಾಗೃತಿ ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಶ್ರೀ ಮಂಜುನಾಥ ಭಟ್ ಅವರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮೂಲಕ ಆರೋಗ್ಯದ ಬಗ್ಗೆ ತಿಳುವಳಿಕೆ ಪಡೆದು, ಹದಿಹರೆಯದ ವಯಸ್ಸಿನಲ್ಲಿ ಜಾಗೃತಿಯಿಂದ ತಮ್ಮ ಹೊಣೆಗಾರಿಕೆ ಅರಿತು ವರ್ತಿಸುವಂತೆ ಕಿವಿಮಾತು ಹೇಳಿದರು. ಚಿತ್ರಕಲೆ ಶಿಕ್ಷಕ ಶ್ರೀ ಮೋಹನ್ ಕಡಬ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಗೃತಿ ಚಟುವಟಿಕೆಗಳು

ನರ್ಸಿಂಗ್ ವಿದ್ಯಾರ್ಥಿಗಳು ಮನಮುಟ್ಟುವ ರೀತಿಯಲ್ಲಿ AIDS ಜಾಗೃತಿ ನಾಟಕವನ್ನು ಪ್ರದರ್ಶಿಸಿ, HIV/AIDS ಕುರಿತು ಕ್ವಿಜ್ ಸ್ಪರ್ಧೆಯನ್ನೂ ಸಹ ಆಯೋಜಿಸಿದರು ಮತ್ತು ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿ ಪ್ರತಿನಿಧಿ ಎಲ್ಸಾ ಮಾರಿಯಾ ಸ್ವಾಗತಿಸಿದರು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ದೇವದಾಸ್ ಡಿ. ಪ್ರಭು ವಂದಿಸಿದರು ಹಾಗೂ ವಿದ್ಯಾರ್ಥಿ ಪ್ರತಿನಿಧಿ ಯಶೋಧಾ ಅವರು ಕಾರ್ಯಕ್ರಮ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ