


ಹಿರಿಯಡ್ಕ: ಉಡುಪಿಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದ ಗೂಡ್ಸ್ ಟೆಂಪೋಗೆ ಸ್ಕೂಟಿ ಬಂದು ಗುದ್ದಿ ಅಪಘಾತ ಸಂಭವಿಸಿದೆ. ಸ್ಕೂಟಿ ಚಾಲಕ ಹಾಗೂ ಟೆಂಪೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.