
ಉಡುಪಿ: ಕಾರ್ಕಳ-ಹೆಬ್ರಿ ರಸ್ತೆಯ ವರಂಗ ಎಂಬಲ್ಲಿ ಇಂದು ಸ್ಲೀಪರ್ ಬಸ್ ಮತ್ತು ಕೆಂಪು ಕಲ್ಲು ತುಂಬಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಈ ಘಟನೆಯಿಂದ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.
































