
ಉಡುಪಿ : ಉಡುಪಿ ತಾಲೂಕಿನ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಟ್ರಕ್‌ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.
ದುರಂತದ ವಿವರ:
ಅಂಬಲಪಾಡಿ ಸುರಭಿ ಆಟೋಮೊಬೈಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ದೆಂದೂರುಕಟ್ಟೆಯ ಪ್ರದೀಪ್ (38) ಮೃತ ದುರ್ದೈವಿ. ಕೆಲಸ ಮುಗಿಸಿ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಪ್ರದೀಪ್ ಅವರ ತಲೆ ಭಾಗವು ಸಂಪೂರ್ಣವಾಗಿ ಛಿದ್ರಗೊಂಡಿದೆ.
ಅಪಘಾತದ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಸಾವರನನ್ನು ಟ್ರಕ್ ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು.
ಘಟನೆಯ ನಂತರ, ಸ್ಥಳೀಯ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಪೊಲೀಸರಿಗೆ ಸಹಕರಿಸಿದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.