ಅಂಬಲಪಾಡಿ ಹೆದ್ದಾರಿ ಬಳಿ ಭೀಕರ ಅಪಘಾತ : ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

Date:

spot_img

ಉಡುಪಿ : ಉಡುಪಿ ತಾಲೂಕಿನ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಟ್ರಕ್‌ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.

ದುರಂತದ ವಿವರ:

ಅಂಬಲಪಾಡಿ ಸುರಭಿ ಆಟೋಮೊಬೈಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ದೆಂದೂರುಕಟ್ಟೆಯ ಪ್ರದೀಪ್ (38) ಮೃತ ದುರ್ದೈವಿ. ಕೆಲಸ ಮುಗಿಸಿ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಪ್ರದೀಪ್ ಅವರ ತಲೆ ಭಾಗವು ಸಂಪೂರ್ಣವಾಗಿ ಛಿದ್ರಗೊಂಡಿದೆ.

ಅಪಘಾತದ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಸಾವರನನ್ನು ಟ್ರಕ್ ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು.

ಘಟನೆಯ ನಂತರ, ಸ್ಥಳೀಯ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಪೊಲೀಸರಿಗೆ ಸಹಕರಿಸಿದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ