ಕಲಬುರಗಿಯಲ್ಲಿ ಭೀಕರ ಮರ್ಯಾದಾ ಹತ್ಯೆ: ಮಗಳನ್ನೇ ಕೊಂದು ಸುಟ್ಟು ಹಾಕಿದ ತಂದೆ

Date:

spot_img

ಕಲಬುರಗಿ: ಅಂತರಜಾತಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಂದೆಯೊಬ್ಬ ತನ್ನ ಸ್ವಂತ ಮಗಳನ್ನೇ ಭೀಕರವಾಗಿ ಕೊಲೆ ಮಾಡಿ, ನಂತರ ಆಕೆಯ ಶವವನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ. ಈ ಹೇಯ ಕೃತ್ಯಕ್ಕಾಗಿ ತಂದೆ ಶಂಕರ್ ಕೊಳ್ಳೂರ್​ನನ್ನು ಪೊಲೀಸರು ಬಂಧಿಸಿದ್ದು, ಆತನಿಗೆ ಸಹಕರಿಸಿದ ಇಬ್ಬರು ಆರೋಪಿಗಳಾದ ಶರಣು ಮತ್ತು ದತ್ತಪ್ಪನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಹತ್ಯೆಗೊಳಗಾದ ಯುವತಿಯನ್ನು ಕವಿತಾ (18) ಎಂದು ಗುರುತಿಸಲಾಗಿದೆ. ಆಕೆ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಅದೇ ಗ್ರಾಮದ ಕುರುಬ ಸಮುದಾಯದ ಯುವಕ ಮಾಳಪ್ಪ ಪೂಜಾರಿಯನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಪ್ರೀತಿ ಪಿಯುಸಿ ಓದುತ್ತಿದ್ದಾಗಲೇ ಚಿಗುರಿತ್ತು. ಪ್ರೀತಿಯ ವಿಚಾರ ಮನೆಯವರಿಗೆ ತಿಳಿದ ತಕ್ಷಣ, ಆಕೆಯ ಕಾಲೇಜು ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಲಾಗಿತ್ತು. ಆದರೆ, ಕವಿತಾ ತಾನು ಮಾಳಪ್ಪನನ್ನು ಮಾತ್ರವೇ ವಿವಾಹವಾಗುವುದಾಗಿ ಪಟ್ಟು ಹಿಡಿದಿದ್ದಳು. ಈ ಹಠದಿಂದಾಗಿ ಕುಟುಂಬದಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಿದ್ದವು.

ಕವಿತಾಳ ನಿಲುವು ಬದಲಾಗದೆ ಹೋದಾಗ, ಮಧ್ಯರಾತ್ರಿ ತಂದೆ ಶಂಕರ್, ತನ್ನ ಸಹೋದರ ಶರಣು ಜೊತೆ ಸೇರಿಕೊಂಡು ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ನಂತರ, ಕೃಮಿನಾಶಕ ಸೇವಿಸಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿ, ಶವವನ್ನು ಹೊಲದಲ್ಲಿ ಸುಟ್ಟು ಹಾಕಿದ್ದಾರೆ. ಈ ಕುರಿತು ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದಾಗ, ಭೀಕರ ಕೊಲೆಯ ರಹಸ್ಯ ಬಯಲಾಗಿದೆ.

ಪೊಲೀಸರ ವಿಚಾರಣೆಯ ವೇಳೆ, ಶಂಕರ್ ತಾನು ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ಕೊಲೆಗೆ ಸಹಕರಿಸಿದ ಇತರ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಘಟನೆಯು ಸಮಾಜದಲ್ಲಿ ಜಾತಿ ಭೇದ ಮತ್ತು ಮರ್ಯಾದಾ ಹತ್ಯೆಗಳಂತಹ ಸಂಪ್ರದಾಯಗಳು ಇಂದಿಗೂ ಜೀವಂತವಾಗಿವೆ ಎಂಬುದಕ್ಕೆ ಒಂದು ನೋವಿನ ಉದಾಹರಣೆಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.