ಮಂಡ್ಯದಲ್ಲಿ ದಾರುಣ ಘಟನೆ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ!

Date:

spot_img

ಮಂಡ್ಯ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ಬಳಿಕ ವಿ.ಸಿ.ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ, ಅವರ ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದೆ. ದಂಪತಿಯ ಮೃತದೇಹ ಪತ್ತೆಯಾಗಿದ್ದು, ಮಗಳ ಶೋಧ ಕಾರ್ಯ ಮುಂದುವರಿದಿದೆ.

ಮಾಸ್ತಪ್ಪ ಆಟೋ ಚಾಲಕನಾಗಿದ್ದು, ಸುಮಾರು 3 ಲಕ್ಷ ರೂ. ಕೈಸಾಲ ಸೇರಿದಂತೆ 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲಗಾರರ ಒತ್ತಡ ಹೆಚ್ಚಾದ ಹಿನ್ನೆಲೆ ಅವರು ಮನೆ ಮಾರಾಟಕ್ಕೆ ಮುಂದಾಗಿದ್ದರು. ಸೋಮವಾರ, ಕುಟುಂಬದೊಂದಿಗೆ ಆಟೋದಲ್ಲಿ ಚಂದಗಾಲು ಬಳಿ ತೆರಳಿ, ಮೊದಲಿಗೆ ವಿಷ ಸೇವಿಸಿ ಬಳಿಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.