ಹೊಸಕೋಟೆಯಲ್ಲಿ ರಕ್ತಸಿಕ್ತವಾದ ರಾಷ್ಟ್ರೀಯ ಹೆದ್ದಾರಿ: ಸರಣಿ ಅಪಘಾತಕ್ಕೆ 7 ಬಲಿ!

Date:

spot_img

ಹೊಸಕೋಟೆ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ದುರಂತವೊಂದು 7 ಮಂದಿಯ ಜೀವವನ್ನು ಬಲಿಪಡೆದಿದೆ. ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಈ ಸಾವು-ನೋವು ಸಂಭವಿಸಿದೆ.

ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ XUV 700 ಕಾರು (ಸಂಖ್ಯೆ KA-03 NW-0138), ಕ್ಯಾಂಟರ್ ಮತ್ತು ಬೈಕ್ ನಡುವೆ ತೀವ್ರ ಸ್ವರೂಪದ ಡಿಕ್ಕಿ ಸಂಭವಿಸಿದೆ. ಈ ಭೀಕರ ಸಂಘರ್ಷದ ಪರಿಣಾಮವಾಗಿ ಕಾರಿನಲ್ಲಿದ್ದ 6 ಪ್ರಾಣಪಕ್ಷಿಗಳು ಸ್ಥಳದಲ್ಲೇ ಹಾರಿಹೋಗಿವೆ. ಇದರೊಂದಿಗೆ ಓರ್ವ ಬೈಕ್ ಸವಾರ ಕೂಡ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮೃತರ ದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಸದ್ಯ ನಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ದುರಂತಕ್ಕೆ ಕಾರಣವೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬಸ್ಥರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.