ಮಾನವ ಹಕ್ಕುಗಳ ಆಯೋಗದ ಹೆಸರು ದುರುಪಯೋಗ: ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ದೂರು.

Date:

spot_img

ಹುಬ್ಬಳ್ಳಿ: ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಹುಬ್ಬಳ್ಳಿಯ ಹಿಂದೂ ಮುಖಂಡ ಸುರೇಶ್‌ ಗೌಡ ಅವರು ದೂರು ದಾಖಲಿಸಿದ್ದು, ಮಟ್ಟಣ್ಣವರ್‌ ಅವರು ಮಾನವ ಹಕ್ಕುಗಳ ಆಯೋಗದ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನ ಪ್ರಕಾರ, ಗಿರೀಶ್‌ ಮಟ್ಟಣ್ಣವರ್‌ ಅವರು ಹುಬ್ಬಳ್ಳಿ ಮೂಲದ ರೌಡಿಶೀಟರ್‌ ಮದನ್‌ ಬುಗಾಡಿ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿಯಂತೆ ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ. ಈ ಮೂಲಕ ಇಲಾಖೆಯ ಹೆಸರನ್ನು ಬಳಸಿಕೊಂಡು ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಸುರೇಶ್ ಗೌಡ ಆರೋಪಿಸಿದ್ದಾರೆ. ಈ ರೀತಿಯ ಸುಳ್ಳು ಮಾಹಿತಿ ನೀಡಿರುವ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆ ಈಗಾಗಲೇ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗದ ಹೆಸರನ್ನು ಬಳಸಿಕೊಂಡು ತನಿಖೆಯ ದಿಕ್ಕು ತಪ್ಪಿಸಲು ಪ್ರಯತ್ನಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರಿನ ಬಗ್ಗೆ ಮಾನವ ಹಕ್ಕುಗಳ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಯರಾಮ ಬನಾನ ಸಾಧನೆಗೆ ಕೋಟ ಪೂಜಾರಿ ಮೆಚ್ಚುಗೆ

ಉದ್ಯಮಿ ಜಯರಾಮ ಬನಾನ ಸಾಧನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಡಾಡಿದ್ದು, ಮೋದಿ ಸರ್ಕಾರದ ಸಾಧನಾ ಪುಸ್ತಕ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ