‘ಕಾಂತಾರ-ಅಧ್ಯಾಯ 1’ಗೆ ಭರ್ಜರಿ ಬುಕ್ಕಿಂಗ್: ಅಡ್ವಾನ್ಸ್‌ ಕಲೆಕ್ಷನ್‌ನಿಂದಲೇ ಕೋಟಿಗಳ ಗಳಿಕೆ!

Date:

spot_img
kantara

ಬೆಂಗಳೂರು: ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಕಾಂತಾರ-ಅಧ್ಯಾಯ 1’ ಮುಂಗಡ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಭರ್ಜರಿ ಆರಂಭ ಪಡೆದಿದೆ. ಬುಕ್ಕಿಂಗ್‌ ಆರಂಭವಾದ ಕೆಲವೇ ಕ್ಷಣಗಳಲ್ಲಿ ಮಲ್ಟಿಪ್ಲೆಕ್ಸ್‌ಗಳ ಹೆಚ್ಚಿನ ಶೋಗಳ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆಗಿವೆ.

ಪ್ರೇಕ್ಷಕರ ‘ಕಾಂತಾರ’ ಕ್ರೇಜ್ ತಣಿಸಲು ಕೆಲವು ಮಲ್ಟಿಪ್ಲೆಕ್ಸ್‌ಗಳು 20ಕ್ಕೂ ಹೆಚ್ಚು ಪ್ರದರ್ಶನಗಳನ್ನು ನಿಗದಿಪಡಿಸಿದ್ದು, ಮೊದಲ ದಿನ ಬೆಳಗ್ಗೆ 6 ಗಂಟೆಯಿಂದಲೇ ಚಿತ್ರ ಪ್ರದರ್ಶನ ಆರಂಭವಾಗಲಿದೆ. ಸಿಂಗಲ್‌ ಸ್ಕ್ರೀನ್‌ಗಳೂ ಸಹ ಮೊದಲ ದಿನ 6 ಶೋಗಳನ್ನು ಪ್ರದರ್ಶಿಸಲು ಮುಂದಾಗಿವೆ.

ಮಲ್ಟಿಪ್ಲೆಕ್ಸ್‌ಗಳಲ್ಲಿ ದುಬಾರಿ ಟಿಕೆಟ್‌ ದರ

ಚಿತ್ರದ ಭಾರಿ ನಿರೀಕ್ಷೆಯ ಲಾಭ ಪಡೆಯಲು ಮಲ್ಟಿಪ್ಲೆಕ್ಸ್‌ಗಳು ಟಿಕೆಟ್‌ ದರವನ್ನು ಗಗನಕ್ಕೇರಿಸಿವೆ. ಪ್ರಸ್ತುತ ಟಿಕೆಟ್ ದರವನ್ನು ₹330 ರಿಂದ ₹400 ವರೆಗೆ ಹೆಚ್ಚಿಸಲಾಗಿದೆ. ಪ್ರೈಮ್‌ ಮತ್ತು ಕ್ಲಾಸಿಕ್‌ ಸೀಟುಗಳ ದರಗಳಲ್ಲಿ ವ್ಯತ್ಯಾಸವಿದ್ದು, ನಿರೀಕ್ಷಿತ ಚಿತ್ರದ ಟಿಕೆಟ್‌ ಭಾರ ಪ್ರೇಕ್ಷಕರ ಜೇಬಿಗೆ ಬಿದ್ದಿದೆ.

ಏಕರೂಪ ಟಿಕೆಟ್‌ ದರದ ಕುರಿತಾದ ಸರ್ಕಾರದ ಆದೇಶವಿದ್ದರೂ, ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಮಲ್ಟಿಪ್ಲೆಕ್ಸ್‌ಗಳು ಮತ್ತೆ ದುಬಾರಿ ಟಿಕೆಟ್‌ ದರ ನಿಗದಿ ಮಾಡಿವೆ. ಇದರಿಂದ ₹236ಕ್ಕೆ ಟಿಕೆಟ್ ಪಡೆಯುವ ಖುಷಿಯಲ್ಲಿದ್ದ ಕುಟುಂಬ ಪ್ರೇಕ್ಷಕರಿಗೆ ನಿರಾಸೆಯಾಗಿದೆ.

ಬುಕ್ಕಿಂಗ್‌ ಆರಂಭವಾಗುತ್ತಿದ್ದಂತೆ ಸಿನಿಮಾ ಪ್ರೇಮಿಗಳು ಮುಗಿಬಿದ್ದ ಕಾರಣ ‘ಕಾಂತಾರ’ ಬುಕ್ಕಿಂಗ್‌ ಟ್ರೆಂಡಿಂಗ್‌ಗೆ ಬಂದಿದ್ದು, ಈ ಅಡ್ವಾನ್ಸ್‌ ಬುಕ್ಕಿಂಗ್‌ನಿಂದಲೇ ನಿರ್ಮಾಪಕರಿಗೆ ಕೋಟ್ಯಾಂತರ ರೂಪಾಯಿ ಹರಿದು ಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.