
ಹೈದರಾಬಾದ್: ಬಹು ಭಾಷಾ ನಟಿ ರಶ್ಮಿಕಾ ಮಂದಣ್ಣ ತಮ್ಮ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ “ನಾನು ಹೈದರಾಬಾದ್ ಮೂಲದವಳು” ಎಂದು ಹೇಳಿದ್ದರಿಂದ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಪ್ರತಿಕ್ರಿಯೆಗಳೊಂದಿಗೆ ವಿವಾದ ಹುಟ್ಟುಹಾಕಿದೆ. ಈ ನಡುವೆ, ರಶ್ಮಿಕಾ ಕರ್ನಾಟಕದ ಕೊಡಗು ಜಿಲ್ಲೆಯ ವಿರಾಜಪೇಟೆಯವರು ಎಂದು ಕೆಲವರು ವಾದಿಸುತ್ತಿದ್ದಾರೆ.