
ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ. ಈದ್‌ಮಿಲಾದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಸೋದರ ಭಾವನೆಯಿಂದ ಬದುಕುವ ಸಂದೇಶ
ಶಾಸಕ ಸಂಗಮೇಶ್ವರ್ ಅವರು ತಮ್ಮ ಭಾಷಣದಲ್ಲಿ, ಕಳೆದ 20 ವರ್ಷಗಳಿಂದ ಈದ್ ಮಿಲಾದ್ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುತ್ತಿರುವ ಮುಸ್ಲಿಂ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿದರು. ಎಲ್ಲಾ ಸಮುದಾಯದವರು ಸೋದರ ಭಾವನೆಯಿಂದ ಬದುಕಬೇಕು. ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿದರೆ ಅಲ್ಲಾಹು ಎಲ್ಲರಿಗೂ ಒಳಿತು ಮಾಡುತ್ತಾನೆ ಎಂದು ಸಂದೇಶ ನೀಡಿದರು.
ಮೆರವಣಿಗೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ
ಶಾಸಕರ ಈ ಹೇಳಿಕೆ ಒಂದು ಕಡೆಯಾದರೆ, ಇದೇ ಮೆರವಣಿಗೆಯ ವೇಳೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.