Virat Kohli: ಕಿರಿಕ್ ಕೊಹ್ಲಿಗೆ ಬಿಸಿ ಮುಟ್ಟಿಸಲು ಮುಂದಾದ ಐಸಿಸಿ

Date:

spot_img

Australia vs India, 4th Test: ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದ ಮೊದಲ ದಿನದಾಟದ ಟೀ ಬ್ರೇಕ್​ ವೇಳೆಗೆ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿದೆ. ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್​ಸ್ಟಾಸ್ (60) ಹಾಗೂ ಉಸ್ಮಾನ್ ಖ್ವಾಜಾ (57) ಅರ್ಧಶತಕ ಬಾರಿಸಿ ಔಟಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಈ ಪಂದ್ಯದ ವೇಳೆ ಕೊಹ್ಲಿ ಆಕ್ರಮಣಕಾರಿ ವರ್ತನೆಯಿಂದ ಗಮನ ಸೆಳೆದಿದ್ದಾರೆ. ಈ ನಡೆಯನ್ನು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಲಿದೆ ಎಂದು ವರದಿಯಾಗಿದೆ. ಪಂದ್ಯದ 10ನೇ ಓವರ್​ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು. ಮೇಲ್ನೋಟಕ್ಕೆ ಕೊಹ್ಲಿ ಉದ್ದೇಶ ಪೂರ್ವಕವಾಗಿಯೇ ಆಸೀಸ್ ಆಟಗಾರನೊಂದಿಗೆ ಜಗಳಕ್ಕಿಳಿದಿರುವುದು ಸ್ಪಷ್ಟವಾಗಿದೆ.
ಈ ಜಗಳ ತಾರಕ್ಕೇರುತ್ತಿದ್ದಂತೆ ಅಂಪೈರ್ ಮತ್ತು ಸಹ ಆಟಗಾರರು ಮಧ್ಯ ಪ್ರವೇಶಿಸಿದ್ದರು. ಇದೀಗ ಈ ಭುಜಬಲದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಘಟನೆಯನ್ನು ಪರಿಶೀಲಿಸಲು ಐಸಿಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ
ಹೀಗಾಗಿ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಬಳಿಕ ಅಥವಾ ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಮ್ಯಾಚ್ ರೆಫರಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ. ಅಲ್ಲದೆ ಇಲ್ಲಿ ಕೊಹ್ಲಿ ತಪ್ಪು ಮಾಡಿರುವುದು ಸಾಬೀತಾದರೆ ಡಿಮೆರಿಟ್ ಪಾಯಿಂಟ್​ನೊಂದಿಗೆ ದಂಡ ವಿಧಿಸುವ ಸಾಧ್ಯತೆ ಹೆಚ್ಚಿದೆ ಏಕೆಂದರೆ ಇದಕ್ಕೂ ಮುನ್ನ ಅಡಿಲೇಡ್ ಟೆಸ್ಟ್​ನಲ್ಲಿ ಟ್ರಾವಿಸ್ ಹೆಡ್ ಜೊತೆ ಕಿರಿಕ್ ಮಾಡಿಕೊಂಡಿದ್ದ ಮೊಹಮ್ಮದ್ ಸಿರಾಜ್​ಗೆ ಐಸಿಸಿ ಡಿಮೆರಿಟ್ ಪಾಯಿಂಟ್ ನೀಡಿ, ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದ್ದರು. ಇದೀಗ ಮೆಲ್ಬೋರ್ನ್​ನಲ್ಲಿ ವಿರಾಟ್ ಕೊಹ್ಲಿ ಮಾತಿನ ಚಕಮಕಿ ನಡೆಸಿರುವ ಕಾರಣ ಇದೇ ಪ್ರಮಾಣದ ದಂಡ ವಿಧಿಸುವ ಸಾಧ್ಯತೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.