“ಯಾರೋ ಕುತ್ಕೊಂಡು ಬಂದ್ ಕರೆ ಕೊಟ್ಟರೆ ಕರ್ನಾಟಕ ಬಂದ್ ಆಗುವುದಿಲ್ಲ!” – ಆರಗ ಜ್ಞಾನೇಂದ್ರ

Date:

spot_img

ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಅನಾವಶ್ಯಕ ಬಂದ್ ಕರೆಯನ್ನು ತೀವ್ರ ಟೀಕಿಸಿದರು. ತೀರ್ಥಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಯಾರೋ ಎಲ್ಲೋ ಕುತ್ಕೊಂಡು ಬಂದ್ ಕರೆ ಕೊಟ್ಟರೆ ಕರ್ನಾಟಕ ಬಂದ್ ಆಗುವುದಿಲ್ಲ. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ಇದೆ, ಇದು ನಡೆಯಬಾರದು” ಎಂದು ಹೇಳಿದರು.

“ನಾಲ್ಕು ಜನ ಪುಂಡರು ಏನಾದರೂ ಮಾಡಿದರೆ ಅದನ್ನು ಇಡೀ ಸಮುದಾಯಕ್ಕೆ ಹೊರೆ ಹಾಕಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕರ್ನಾಟಕ ಮತ್ತು ಮಹಾರಾಷ್ಟ್ರ, ಭಾರತ ಮತ್ತು ಪಾಕಿಸ್ತಾನವೋ? ಈ ರೀತಿಯ ಡಿವೈಡ್ ಅಂಡ್ ರೂಲ್ ನೀತಿಯನ್ನೇ ಕೆಲವರು ಅನುಸರಿಸುತ್ತಿದ್ದಾರೆ” ಎಂದು ಅವರು ಸರ್ಕಾರದ ನಿರ್ಲಕ್ಷ್ಯವನ್ನು ಟೀಕಿಸಿದರು.

ಗೃಹ ಖಾತೆ ಬದುಕಿದೆಯಾ? – ಆರಗ ಜ್ಞಾನೇಂದ್ರ ತೀವ್ರ ಪ್ರಶ್ನೆ
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರಗ ಜ್ಞಾನೇಂದ್ರ ಕಿಡಿಕಾರಿದರು. “ನಮ್ಮ ಪೊಲೀಸರನ್ನೇ ರಕ್ಷಿಸಲು ಮಿಲಿಟರಿ ತರುವ ಪರಿಸ್ಥಿತಿ ಬಂದಿದೆ. ಮೈಸೂರಿನಲ್ಲಿ ಐಪಿಎಸ್ ಅಧಿಕಾರಿಯ ವಾಹನ ಜಖಂ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಮರೀಚಿಕೆಯಾಗಿದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

“ಮಾದಕ ವಸ್ತುಗಳ ಕಳ್ಳಸಾಗಣೆ, ರಿಯಲ್ ಎಸ್ಟೇಟ್ ಅವ್ಯಾಹತವಾಗಿ ನಡೆಯುತ್ತಿದೆ. ಪೊಲೀಸ್ ಇಲಾಖೆಯೇ ಹಾಳಾಗುತ್ತಿದೆ” ಎಂದು ಅವರು ಆರೋಪಿಸಿದರು. “ಇತ್ತೀಚಿನ ಸರ್ಕಾರದ ನಿರ್ಲಕ್ಷ್ಯದಿಂದ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಲು ಅಸಾಧ್ಯ ಸ್ಥಿತಿಗೆ ತಲುಪಿದ್ದಾರೆ” ಎಂದು ಅವರು ಕಿಡಿಕಾರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.