ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ

Date:

spot_img
Mahesh_Shetty_Thimarodi1

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 27ಕ್ಕೆ ನಡೆಯಲಿದೆ. ಈ ಸಂಬಂಧ ನ್ಯಾಯಾಲಯ ಸಹಾಯಕ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ನೋಟಿಸ್ ಜಾರಿಗೊಳಿಸಿದೆ.

ಪೊಲೀಸರ ಹುಡುಕಾಟ ತೀವ್ರ:

ಒಂದೆಡೆ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದೆಡೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಅವರು ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಬಾರಿ ಅವರ ಮನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಲಾಗಿದೆ. ಆದರೆ, ಅವರು ಇನ್ನೂ ಹಾಜರಾಗಿಲ್ಲ. ಹಾಗಾಗಿ ಪೊಲೀಸರು ನಾಳೆ (ಸೆಪ್ಟೆಂಬರ್ 26) ಮೂರನೇ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ.

ಪುತ್ತೂರು ಸಹಾಯಕ ಕಮಿಷನರ್ ಅವರು ತಿಮರೋಡಿ ಗಡೀಪಾರಿಗೆ ಆದೇಶ ನೀಡಿರುವ ಕಾರಣ, ಬೆಳ್ತಂಗಡಿ ಪೊಲೀಸರು ಗಡೀಪಾರು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ತಿಮರೋಡಿ ಉಜಿರೆಯ ಮನೆಯಲ್ಲಿ ಇಲ್ಲದ ಕಾರಣ, ಬೆಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಮೇಲೆ ಪೊಲೀಸ್ ತಂಡಗಳು ಅಲ್ಲಿಗೆ ತೆರಳಿ ಶೋಧ ಕಾರ್ಯ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ