spot_img

ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಶಿರಿಯಾರ ಮತ್ತು ಹಾರ್ದಳ್ಳಿ ನಿವಾಸಿಗಳಿಬ್ಬರ ಬಂಧನ

Date:

spot_img

ಉಡುಪಿ : ಕ್ರಿಕೆಟ್ ಬೆಟ್ಟಿಂಗ್ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂನ್ 3ರಂದು ರಾತ್ರಿ 10 ಗಂಟೆಗೆ ಸಾಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಬಂಧಿತರಾದವರು ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ನಿವಾಸಿ ಶಿವರಾಜ್ (32) ಮತ್ತು ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಯಾಗಿರುವ ಪ್ರದೀಪ್ (37) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಈ ಇಬ್ಬರು ಚಂದ್ರ ಜನ್ನಾಡಿ ಎಂಬಾತನ ಜೊತೆಗೂಡಿ ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು ಬಳಸಿಕೊಂಡು ಅಕ್ರಮವಾಗಿ ಹಣದ ಜುಗಾರಿ ನಡೆಸುತ್ತಿದ್ದರು. ಅವರಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಲಾಗುತ್ತಿದ್ದ ಮೂರು ಮೊಬೈಲ್‌ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು, ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಕ್ಷಾಬಂಧನ

ರಕ್ಷಾಬಂಧನ, ಪ್ರೀತಿ ಮತ್ತು ವಿಶ್ವಾಸದ ಸಂಕೇತವಾಗಿರುವ ಈ ಹಬ್ಬ, ಸಹೋದರ-ಸಹೋದರಿಯರ ನಡುವಿನ ಪವಿತ್ರ ಬಂಧವನ್ನು ಬಲಪಡಿಸುತ್ತದೆ

“ಪ್ರತಿಶತ ನೂರರಷ್ಟು ನೋಂದಣಿ ಆಗಬೇಕು”: ಜನನ-ಮರಣ ದಾಖಲೆ ನಿರ್ವಹಣೆಗೆ ಡಿಸಿ ಸೂಚನೆ

ನಾಗರಿಕರ ಜನನ ಮತ್ತು ಮರಣ ದಾಖಲೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

165.9 ಕೋಟಿ ನಿಮಿಷ ವೀಕ್ಷಣೆ ಕಂಡ ಸ್ಮೃತಿ ಇರಾನಿ ಧಾರಾವಾಹಿಯ ಹೊಸ ದಾಖಲೆ

ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅಭಿನಯದ ಧಾರಾವಾಹಿ 'ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ' ಯ ಎರಡನೇ ಆವೃತ್ತಿಯು ಪ್ರಸಾರವಾದ ಮೊದಲ ವಾರದಲ್ಲೇ ಭಾರಿ ಯಶಸ್ಸು ಗಳಿಸಿದೆ.

ಅಮೆರಿಕದ ಆರ್ಥಿಕ ಧಮ್ಕಿಗೆ ಕ್ಯಾರೆ ಎನ್ನದ ಭಾರತ , ರಷ್ಯಾದೊಂದಿಗೆ ಹೊಸ ಒಪ್ಪಂದಕ್ಕೆ ಸಹಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಬೆದರಿಕೆ ಹಾಕಿದ ನಡುವೆಯೇ, ಭಾರತ ಮತ್ತು ರಷ್ಯಾ ದೇಶಗಳು ತಮ್ಮ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ.