ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

Date:

spot_img

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗಕ್ಕೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರ ವಿರುದ್ಧ ಎಪ್ರಿಲ್ 19ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ಮೇಲೆ ದೂರು ದಾಖಲಾಗಿದೆ . ಬೆಳ್ತಂಗಡಿ ಠಾಣೆಯ ಎಸ್‌ಐ ಮುರಳೀಧರ ನಾಯ್ಕ ಕೆ.ಜಿ. ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಶಾಂತಿ ಭಂಗಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ.

ಇದಕ್ಕೂ ಮುನ್ನ, ಪುನೀತ್ ಕೆರೆಹಳ್ಳಿ ಅವರು ಉಜಿರೆಗೆ ಬರುವ ಸಾಧ್ಯತೆ ಹಿನ್ನೆಲೆ, ಅವರ ಪ್ರಚೋದನಕಾರಿ ಭಾಷಣದಿಂದ ಶಾಂತಿ ಭಂಗ ಉಂಟಾಗಬಹುದೆಂಬ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಬಿಎನ್‌ಎಸ್ 2023ರ ಕಲಂ 163ರ (ಬಿ) ಅಡಿಯಲ್ಲಿ ಜಿಲ್ಲೆಯಲ್ಲಿ ಪ್ರವೇಶಿಸದಂತೆ ನಿರ್ಬಂಧಾಜ್ಞೆ ಜಾರಿಗೆ ತಂದಿದ್ದರು.

ಆದರೆ, ಶನಿವಾರ ಸಂಜೆ ಉಜಿರೆಯ ಕಾಲೇಜು ಬಳಿಯ ರಸ್ತೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿ ನಿರ್ಬಂಧಿತ ಪ್ರದೇಶದಲ್ಲಿ ಅಕ್ರಮವಾಗಿ ಕೂಟ ಸೇರಿ, ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿ ಶಾಂತಿ ಭಂಗಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ