ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

Date:

spot_img

ಹೈದರಾಬಾದ್‌ : ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿರುವ ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ, ಮಾಜಿ ಸಚಿವ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಅನಂತಪುರ ಜಿಲ್ಲೆ ಓಬಳಾಪುರಂನಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟ ಈ ಪ್ರಕರಣದಲ್ಲಿ ಕಳೆದ 13 ವರ್ಷಗಳಿಂದ ವಿಚಾರಣೆ ನಡೆಯುತ್ತಿತ್ತು. ಈ ಅವಧಿಯಲ್ಲಿ 3,400 ಕ್ಕೂ ಹೆಚ್ಚು ದಾಖಲೆಗಳು ಪರಿಶೀಲನೆಗೆ ಒಳಪಡಿಸಿದರೆ, 219 ಸಾಕ್ಷಿಗಳಿಂದ ಜಾರಿ ಸಂಸ್ಥೆಗಳು ಮಾಹಿತಿ ಸಂಗ್ರಹಿಸಿದ್ದವು.

OMC ಕಂಪನಿಯ ಮಾಲೀಕರಾಗಿದ್ದ ಜನಾರ್ದನ ರೆಡ್ಡಿ ಅವರು ಅಕ್ರಮ ಗಣಿಗಾರಿಕೆ ಮೂಲಕ ಭಾರೀ ಪ್ರಮಾಣದ ಲಾಭ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ನ್ಯಾಯಾಲಯ ಅವರ ವಿರುದ್ಧದ ಆರೋಪಗಳನ್ನು ದೃಢಪಡಿಸಿ 7 ವರ್ಷಗಳ ಶಿಕ್ಷೆ ವಿಧಿಸಿದೆ. ಇದರಿಂದಾಗಿ, ಅವರ ಶಾಸಕರ ಸ್ಥಾನ ಉಳಿಯುವದೋ ಇಲ್ಲವೋ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದೇ ಪ್ರಕರಣದಲ್ಲಿ ಇತರ ಆರೋಪಿಗಳಾದ ವಿಡి. ರಾಜಗೋಪಾಲ್, ಲಿಂಗಾರೆಡ್ಡಿ, ಮತ್ತು ಕೆ. ಮೆಹಫೂಸ್ ಅಲಿ ಖಾನ್ ಸಹ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.