ಅಕ್ರಮ ಕೆಂಪು ಕಲ್ಲು ಸಾಗಾಟ: ಲಾರಿ ಸಮೇತ ಚಾಲಕ ಬಂಧನ

Date:

spot_img

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು, ಅದರ ಚಾಲಕನನ್ನು ಬಂಧಿಸಿದ್ದಾರೆ.

ಪ್ರಕರಣದ ವಿವರ

ಆಗಸ್ಟ್ 7ರಂದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಸೋಮನಾಥ ರೈ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ಕಾರ್ಯಾಚರಣೆ ನಡೆಸಿದ್ದಾರೆ. ವಿಟ್ಲ ಕಸಬ ಗ್ರಾಮದ ಪ್ರಸಾದ್ ಸರ್ವೀಸ್ ಸ್ಟೇಷನ್ ಬಳಿಯ ರಸ್ತೆಯಲ್ಲಿ ಕೇಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA-21-C-6056 ನಂಬರ್‌ನ ಲಾರಿಯನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.

ಲಾರಿಯ ಚಾಲಕ ಹಕಿಂ (30) ಎಂಬಾತನನ್ನು ಬಂಧಿಸಲಾಗಿದೆ. ಈತ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿ. ಈತ ಯಾವುದೇ ಪರವಾನಿಗೆ ಮತ್ತು ದಾಖಲಾತಿಗಳಿಲ್ಲದೆ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ಕೆಂಪು ಕಲ್ಲುಗಳನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸುಮಾರು ₹10 ಲಕ್ಷ ಮೌಲ್ಯದ ಲಾರಿ ಮತ್ತು ₹14,000 ಮೌಲ್ಯದ ಕೆಂಪು ಕಲ್ಲುಗಳನ್ನು ಜಪ್ತಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.