
ಬೆಂಗಳೂರು: ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಜೈಲುಪಾಲಾದ ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.
ಮದುವೆಯಾದಾಗಿನಿಂದ ರನ್ಯಾರಿಂದ ನಿರಂತರವಾಗಿ ತೊಂದರೆ ಎದುರಿಸುತ್ತಿದ್ದ ಕಾರಣ ಜತಿನ್ ಈ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದೀಗ, ಅಕ್ರಮ ಚಿನ್ನ ಕೇಸ್‌ನಲ್ಲಿ ರನ್ಯಾ ರಾವ್ ಹೆಸರು ಬೆಸೆದುಕೊಂಡಿರುವುದರಿಂದ, ಅವರೊಂದಿಗೆ ಸಂಬಂಧ ಕಡಿದುಕೊಳ್ಳಲು ಜತಿನ್ ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.