spot_img

ಪುರಸಭಾ ವ್ಯಾಪ್ತಿಯ ರಸ್ತೆ ಹೊಂಡಗಳನ್ನು ತಕ್ಷಣ ಮುಚ್ಚಿ ಇಲ್ಲವಾದರೆ ಪ್ರತಿಭಟನೆ ಎದುರಿಸಿ : ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ

Date:

ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳೇ ತುಂಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ ಪುರಸಭಾ ಆಡಳಿತ ತಕ್ಷಣ ಎಲ್ಲಾ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆಯನ್ನು ಎದುರಿಸಬೇಕಾದಿತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಪುರಸಭೆಯನ್ನು ಎಚ್ಚರಿಸಿದ್ದಾರೆ.

ಪುರಸಭೆಯ ಪ್ರಮುಖ ರಸ್ತೆಗಳು ಹೊಂಡಗಳಿಂದ ತುಂಬಿದ್ದು ಈ ರಸ್ತೆಯಲ್ಲಿ ಸಂಚಾರ ಅಸಾಧ್ಯವಾಗಿದೆ. ಪ್ರತಿನಿತ್ಯ ದ್ವಿಚಕ್ರ ವಾಹನಗಳ ಅಪಘಾತಗಳಾಗಿ ಸವಾರರು ರಸ್ತೆಗೆ ಬಿದ್ದು ದೈಹಿಕ ಹಾನಿಗೊಳಗಾಗಿದ್ದಾರೆ. ಈ ಬಗ್ಗೆ ಎಷ್ಟೇ ‌ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಪುರಸಭೆಯ ಈ ನಿರ್ಲಕ್ಷ ಧೋರಣೆ ಸರಿಯಲ್ಲ ಎಂದಿದ್ದಾರೆ.

ರಥಬೀದಿ ಮತ್ತು ಅನೇಕ ಕಡೆಗಳಲ್ಲಿ ಒಳಚರಂಡಿಯ ಮಲ ಮೂತ್ರದ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಅದನ್ನೇ ತುಳಿದು ದೇವಸ್ಥಾನಕ್ಕೆ ಹೋಗಬೇಕಾದ ಅನಿವಾರ್ಯತೆ ಭಕ್ತರಿಗಾಗಿದೆ, ಆದರೂ ಪುರಸಭೆಯ ಮೌನ ಆಶ್ಚರ್ಯ ತಂದಿದೆ. ತಕ್ಷಣ ಈ ಬಗ್ಗೆ ಗಮನ ಹರಿಸಿ ಸೂಕ್ತಕ್ರಮ ಜರುಗಿಸಬೇಕು , ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆ ಎದುರಿಸಬೇಕಾದೀತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗರವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜಕೀಯ ಅಂತ್ಯದ ಭವಿಷ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಯಿ ಚಾಮುಂಡಿ ಶಾಪ, ಅಧಿಕಾರ ಪತನ ನಿಶ್ಚಿತ ಎಂದ ಯತ್ನಾಳ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ತಾಯಿ ಚಾಮುಂಡೇಶ್ವರಿಯ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.

HMD ಯಿಂದ ಹೊಸ 5G ಸ್ಮಾರ್ಟ್‌ಫೋನ್ ಅನಾವರಣ: ಯುವ ಗ್ರಾಹಕರನ್ನು ಗುರಿಯಾಗಿಸಿಕೊಂಡು Vibe 5G ಬಿಡುಗಡೆ

ಪ್ರಸಿದ್ಧ ಮೊಬೈಲ್ ತಯಾರಿಕಾ ಕಂಪನಿ ಹೆಚ್‌ಎಂಡಿ (HMD), ಭಾರತದ ಮಾರುಕಟ್ಟೆಗೆ ತನ್ನ ಹೊಸ 5G ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ.

ಬೀಟ್‌ರೂಟ್‌ ಬಳಸಿ ಹೊಳೆಯುವ ತ್ವಚೆ ಪಡೆಯುವ ಸುಲಭ ವಿಧಾನಗಳು

ನೈಸರ್ಗಿಕ ಸೌಂದರ್ಯವರ್ಧಕಗಳಲ್ಲಿ ಒಂದಾದ ಬೀಟ್ ರೂಟ್, ಆರೋಗ್ಯ ಮತ್ತು ಸೌಂದರ್ಯಕ್ಕೆ ಅದ್ಭುತ ಕೊಡುಗೆ ನೀಡುತ್ತದೆ.

ಪಂದ್ಯಾಟ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಒಗ್ಗೂಡಿಸುವ ಕ್ರೀಡೆ : ಪ್ರಭಾಕರ ಜೈನ್.

ಕೆ.ಎಮ್.ಇ.ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ.