
ಉಡುಪಿ ನಗರದ ವಸತಿಗೃಹವೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗೆ ಸಂಬಂಧಿಸಿದಂತೆ ಪೊಲೀಸರು ದಾಳಿ ನಡೆಸಿ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ.
ಉಡುಪಿಯ ಸನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದು, ಶಿವಮೊಗ್ಗ ಮೂಲದ ಮಹಿಳೆಯನ್ನು ಕೆಲಸ ಕೊಡಿಸುವುದಾಗಿ ಕರೆಸಿಕೊಂಡು ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿ ಕೇಶವ ಎಂಬಾತ ಮಹಿಳೆಯನ್ನು ವಸತಿಗೃಹದಲ್ಲಿ ಬಲವಂತವಾಗಿ ಇರಿಸಿ, ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಲು ಯತ್ನಿಸಿದ್ದಾನೆ. ದಾಳಿ ವೇಳೆ ಪೊಲೀಸರು ಮಹಿಳೆಯನ್ನು ರಕ್ಷಿಸಿ, ವಸತಿಗೃಹ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.