

ಹಿರಿಯಡ್ಕ: ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ, ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ, ರಾಮನಗರ ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಅವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಫೆಬ್ರವರಿ.11) ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಉದ್ಘಾಟನೆ ಹಾಗೂ ಡಿ.ಡಿ. ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ (ಅದಮಾರು ಮಠ, ಉಡುಪಿ) ದಿವ್ಯ ಸಾನಿಧ್ಯದಲ್ಲಿ ನಡೆದ ಈ ಸಮಾರಂಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶ್ರೀ ಕೆ. ನಾಗಣ್ಣಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಶಸ್ತಿ ಪ್ರದಾನ ಕಾರ್ಯವನ್ನು ಮಣಿಪಾಲ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ವೆಂಕಟೇಶ್ ರವರು ನೆರವೇರಿಸಿದರು. ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಉಪನ್ಯಾಸಕ ಶ್ರೀ ಲಕ್ಷ್ಮಿ ಜನಾರ್ಧನ ಭಟ್ ಅವರನ್ನು ಸನ್ಮಾನಿಸಲಾಯಿತು.
ಮಕ್ಕಳ ರಕ್ಷಣೆಯ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಶ್ರೀ ಯೋಗೀಶ್ ಪಿ.ಆರ್. ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ನಾಗರತ್ನ ನಾಯಕ್, ಬಿ.ಇ.ಒ ಡಾ. ಯಲ್ಲಮ್ಮ, ಡಿ.ಡಿ. ಉಪಾಧ್ಯಾಯ ಆರೋಗ್ಯ ಕೇಂದ್ರದ ಕಾರ್ಯದರ್ಶಿಯಾದ ಡಿ. ಸುಜಾತ, ಹಾಗೂ ಕೆ.ಪಿ.ಎಸ್. ಹಿರಿಯಡ್ಕ ಪ್ರಾಂಶುಪಾಲರಾದ ಮಂಜುನಾಥ್ ಭಟ್ ಉಪಸ್ಥಿತರಿದ್ದರು.