
ಪೆರ್ಡೂರು : ಕುಕ್ಕುಂಜಾರು ಅಭಿವೃದ್ಧಿ ಸಮಿತಿ ವತಿಯಿಂದ ಕುಕ್ಕುಂಜಾರು ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಮಿತಿಯ ಅಧ್ಯಕ್ಷರಾದ ಸತೀಶ್ ಕುಲಾಲ್ ಅವರು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ನಂತರ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಈ ಹಿಂದೆ ನಡೆದ ಕ್ರೀಡೋತ್ಸವದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳು, ಶ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ನವೋದಯ ಸ್ವಸಹಾಯ ಸಂಘದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರು, ಊರ ಸಮಸ್ತ ನಾಗರಿಕರು ಹಾಗೂ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.