ಪಾಕಿಸ್ತಾನದ ಎರ್‌ಬೇಸ್‌ಗಳನ್ನೇ ನೆಲಸಮ ಮಾಡಿದ ಭಾರತ! ‘ಸಿಂದೂರದ ಶಕ್ತಿಯೇ ಇದು’ ಎಂದ ಪ್ರಧಾನಿ ಮೋದಿ

Date:

spot_img

ಬಿಹಾರ, ಮೇ 30 : ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ “ಆಪರೇಷನ್ ಸಿಂದೂರ್” ನ ಹೆಸರಿನಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ಏರ್ ಬೇಸ್‌ಗಳು ಮತ್ತು ಉಗ್ರರ ತಾಣಗಳನ್ನು ಕ್ಷಣಾರ್ಧದಲ್ಲಿ ನಾಶಮಾಡಿದ ಶೌರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಉಲ್ಲೇಖಿಸಿದರು.

ಬಿಹಾರದ ಕರಾಕತ್ ಪಟ್ಟಣದಲ್ಲಿ ಶುಕ್ರವಾರ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಗಾಮ್ ದಾಳಿಯ ಬಳಿಕ ದೇಶದ ಭದ್ರತೆಗೆ ಪ್ರತಿಸ್ಪಂದನೆ ನೀಡುವ ಮಾತು ನೀಡಿದ್ದೇನೆ ಮತ್ತು ಅದನ್ನು ಈಡೇರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. “ಪಾಕಿಸ್ತಾನದ ಸೇನೆಯ ರಕ್ಷಣೆಯಡಿ ಅಡಗಿದ್ದ ಉಗ್ರರು, ನಮ್ಮ ಪಡೆಗಳ ತೀವ್ರ ದಾಳಿಗೆ ನಲುಗಿದರು. ಕೆಲವೇ ನಿಮಿಷಗಳಲ್ಲಿ ಪಾಕಿಸ್ತಾನದಲ್ಲಿನ ಹಲವು ಭಯೋತ್ಪಾದಕ ತಾಣಗಳು ಮತ್ತು ವಾಯುನೆಲೆಗಳು ನಾಶವಾಗಿವೆ,” ಪಾಕಿಸ್ತಾನ ಮತ್ತು ಜಗತ್ತಿಗೆ ಸಿಂದೂರದ ಶಕ್ತಿ ಏನೆಂದು ತೋರಿಸಿದ್ದೇವೆ,” ಎಂದು ಮೋದಿ ಹೇಳಿದರು.

“ಪಹಲ್ಲಾಮ್ ಘಟನೆಯ ಎರಡು ದಿನಗಳ ನಂತರ ನಾನು ಬಿಹಾರಕ್ಕೆ ಭೇಟಿ ನೀಡಿ ಭಯೋತ್ಪಾದಕ ಅಡಗುತಾಣಗಳನ್ನು ನೆಲಸಮ ಮಾಡಲಾಗುವುದು ಎಂದು ಬಿಹಾರದ ಮಣ್ಣಿನಿಂದ ದೇಶಕ್ಕೆ ಭರವಸೆ ನೀಡಿದ್ದೆ. ಅವರಿಗೆ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ನೀಡಲಾಗುವುದು ಎಂದು ನಾನು ಹೇಳಿದ್ದೆ. ಈಗ ನಾನು ಬಿಹಾರಕ್ಕೆ ಹಿಂತಿರುಗಿದ್ದೇನೆ, ನಾನು ನನ್ನ ಭರವಸೆಯನ್ನು ಈಡೇರಿಸಿದ್ದೇನೆ” ಎಂದು ಹೆಮ್ಮೆಯಿಂದ ಪ್ರಧಾನಿ ಮೋದಿ ಇಡೀ ಜಗತ್ತಿಗೆ ಸಿಂದೂರದ ಶಕ್ತಿಯ ಬಗ್ಗೆ ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.