
ಪಹಲ್ಗಾಮ್ ದಾಳಿ ಬಳಿಕ ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕಿಸ್ತಾನ ವಿರುದ್ಧ ಭಾರತ ಹಲವಾರು ಮಾಸ್ಟರ್ ಸ್ಟ್ರೋಕ್ ನಡೆಸಿದ್ದು, ಯುದ್ಧದ ಕಾರ್ಮೋಡಗಳು ತೀವ್ರಗೊಂಡಿವೆ. ಅಮೆರಿಕ ಮತ್ತು ಇಸ್ರೇಲ್‌ನ ಯುದ್ಧ ವಿಮಾನಗಳು ಭಾರತದಲ್ಲಿ ಇಳಿದಿರುವುದರಿಂದ ಪರಿಸ್ಥಿತಿ ಮತ್ತಷ್ಟು ರಣರಂಗ ರೂಪಿಸುತ್ತಿರುವುದು ಸ್ಪಷ್ಟವಾಗಿದೆ.
ಈ ನಡುವೆ ಪಾಕಿಸ್ತಾನಕ್ಕೆ ಚೀನಾ ಬೆಂಬಲ ಘೋಷಣೆ ನೀಡಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಭಾರತ ಮತ್ತು ಪಾಕಿಸ್ತಾನ ಎರಡೂ ಶಾಂತಿಯನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಅಲ್ಲದೆ, ಪಾಕಿಸ್ತಾನದ ಸಾರ್ವಭೌಮತ್ವ ಹಾಗೂ ಭದ್ರತಾ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಚೀನಾ ಸದಾ ಬದ್ಧವಾಗಿದೆ ಎಂದು ವಾಂಗ್ ಯಿ ಪುನರುಚ್ಚರಿಸಿದ್ದಾರೆ. ಪಾಕಿಸ್ತಾನದ ಭದ್ರತಾ ಕಾಳಜಿಗಳನ್ನು ಚೀನಾ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದು, ಭಯೋತ್ಪಾದನೆ ವಿರುದ್ಧದ ಪಾಕ್ ಕ್ರಮಗಳಿಗೆ ಬೆಂಬಲ ನೀಡಿದೆ ಎಂದು ಚೀನಾ ತಿಳಿಸಿದೆ.