spot_img

ಭಾರತ-ಪಾಕ್ ಉದ್ವಿಗ್ನತೆ: ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ, ಸರ್ಕಾರಿ ನೌಕರರ ರಜೆ ರದ್ದು!

Date:

spot_img

ದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತಾ ಅಲರ್ಟ್ ಘೋಷಿಸಲಾಗಿದ್ದು, ಎಲ್ಲ ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ. ಈಗಾಗಲೇ ರಜೆಯಲ್ಲಿ ಇದ್ದವರು ಕೂಡಲೇ ಕೆಲಸಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.

ಇಂಡಿಯಾ ಗೇಟ್ ಸೇರಿದಂತೆ ಜನಸಂದಣಿಯ ಪ್ರದೇಶಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ತುರ್ತು ಸಭೆಗಳನ್ನು ನಡೆಸುತ್ತಿದ್ದಾರೆ.

ಲಾಹೋರ್ ದಾಳಿ ಬಳಿಕ ದೇಶದ ಭದ್ರತೆ ಬಿಗಿ

ಕಳೆದ ರಾತ್ರಿ ಪಾಕಿಸ್ತಾನ ಸೇನೆ ಭಾರತದ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಲೂಧಿಯಾನ, ಬಟಿಂಡಾ ಸೇರಿದಂತೆ ಹಲವೆಡೆ ದಾಳಿ ಯತ್ನಿಸಿ ವಿಫಲವಾಗಿದ್ದು, ತಕ್ಷಣ ಪ್ರತಿದಾಳಿ ನಡೆಸಿದ ಭಾರತ ಲಾಹೋರ್‌ನಲ್ಲಿನ ಪಾಕ್ ಸೇನಾ ನೆಲೆಗಳನ್ನು ನಾಶಮಾಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.

ಭದ್ರತಾ ವ್ಯವಸ್ಥೆಗಾಗಿ ಎಲ್ಲ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸುತ್ತಿದ್ದು, ರಾತ್ರಿ ಗಸ್ತು ತಿರುಗುವಿಕೆಯೂ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೂತನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಕುಲ್ಗಾಮ್‌ನಲ್ಲಿ 3 ಉಗ್ರರ ಹತ್ಯೆ

ಕಣಿವೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸ್ಥಾಪಿಸಲು ಭಾರತೀಯ ಸೇನೆಯು ಮತ್ತೊಂದು ಮಹತ್ವದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ವಿದ್ಯಾರ್ಥಿನಿ ರಕ್ಷಣೆ ಮರೆತ ಪಿಜಿ ಮಾಲೀಕ: ಅತ್ಯಾಚಾರವೆಸಗಿ ಅಂದರ್

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪಿ.ಜಿ. ಮಾಲೀಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಅಜ್ಞಾತ ಶವಗಳ ಬೆನ್ನು ಹತ್ತಿದ ಪೊಲೀಸರು; 13 ನಿರ್ದಿಷ್ಟ ಸ್ಥಳಗಳಲ್ಲಿ ಬಿಗಿ ಭದ್ರತೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವು ಹೊಸ ತಿರುವು ಪಡೆದುಕೊಂಡಿದ್ದು, ಭಾನುವಾರದಂದು ಶೋಧ ಕಾರ್ಯಕ್ಕೆ ವಿರಾಮ ನೀಡಲಾಗಿದೆ.

ಉಡುಪಿ ಸರಣಿ ಮನೆಗಳ್ಳತನದ ಸೂತ್ರಧಾರ ಸೆರೆ: ₹8.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಳೆದ ತಿಂಗಳು ಉಡುಪಿ ನಗರದಲ್ಲಿ ಸರಣಿ ಮನೆಗಳ್ಳತನ ನಡೆಸಿ ಪೊಲೀಸರಿಗೆ ಸವಾಲಾಗಿದ್ದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರ ವಿಶೇಷ ತಂಡವು ಯಶಸ್ವಿಯಾಗಿದೆ