ಭಾರತ-ಅಮೆರಿಕ ನಡುವೆ ತೈಲ ರಾಜತಂತ್ರ ಬಿಕ್ಕಟ್ಟು: ‘ಮೋದಿ ಭರವಸೆ ನೀಡಿದ್ದಾರೆ’ ಎಂಬ ಟ್ರಂಪ್ ಹೇಳಿಕೆಗೆ ಭಾರತದಿಂದ ಸ್ಪಷ್ಟ ನಿರಾಕರಣೆ

Date:

spot_img
modi trump11

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ತೈಲ ಆಮದುಗಳನ್ನು ಮಿತಿಗೊಳಿಸದಿದ್ದಲ್ಲಿ ಭಾರತದ ಮೇಲೆ ಭಾರಿ ಸುಂಕ ವಿಧಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಆಮದುಗಳನ್ನು ನಿಲ್ಲಿಸುವುದಾಗಿ ವೈಯಕ್ತಿಕವಾಗಿ ತಮಗೆ ಭರವಸೆ ನೀಡಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ರಷ್ಯಾದೊಂದಿಗೆ ತೈಲ ಖರೀದಿಗೆ ಹೋಗುವುದಿಲ್ಲ ಎಂದು ಭಾರತದ ಪ್ರಧಾನಿ ನನಗೆ ಹೇಳಿದ್ದಾರೆ. ಆದರೆ, ಅವರು ಮತ್ತೆ ತೈಲ ಖರೀದಿ ಮುಂದುವರೆಸಿದರೆ, ಅವರು ಭಾರಿ ಸುಂಕವನ್ನು ಪಾವತಿಸಬೇಕಾಗುತ್ತದೆ,” ಎಂದರು.

ಟ್ರಂಪ್ ಹೇಳಿಕೆ ನಿರಾಕರಿಸಿದ ಭಾರತ

ಬುಧವಾರ ಟ್ರಂಪ್ ಅವರು “ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ,” ಎಂದು ಹೇಳಿ, ಇದನ್ನು “ದೊಡ್ಡ ಹೆಜ್ಜೆ” ಎಂದು ಕರೆದಿದ್ದರು. ಆದರೆ, ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಪ್ರಧಾನಿ ಮೋದಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಭಾರತ ಸರ್ಕಾರದ ಪ್ರತಿಕ್ರಿಯೆ ಕುರಿತು ಉತ್ತರಿಸಿದ ಟ್ರಂಪ್, “ಆ ರೀತಿ ಅವರು ಹೇಳಿದರೆ, ಅವರು ಭಾರಿ ಸುಂಕ ಪಾವತಿಸುವುದನ್ನು ಮುಂದುವರೆಸುತ್ತಾರೆ. ಅವರು ಅದನ್ನು ಮಾಡಲು ಬಯಸುವುದಿಲ್ಲ,” ಎಂದು ತಮ್ಮ ಹಳೆಯ ಎಚ್ಚರಿಕೆಯನ್ನೇ ಪುನರುಚ್ಚರಿಸಿದರು. ಗುರುವಾರ ಸಾಪ್ತಾಹಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ MEA ವಕ್ತಾರ ರಣಧೀರ್ ಜೈಸ್ವಾಲ್, ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಅಂತಹ ಯಾವುದೇ ಸಂಭಾಷಣೆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ