
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ತೋರಿ ಬಲಿಷ್ಠ ನ್ಯೂಜಿಲೆಂಡ್ ವಿರುದ್ಧ ಜಯಭೇರಿ ಬಾರಿಸಿದೆ. 12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿ ಗೆದ್ದು, ಭಾರತ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ.
ದುಬೈನ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 251 ರನ್ ಗಳಿಸಿತು. ಈ ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಭರ್ಜರಿ ಆರಂಭ ನೀಡಿದರು. ಆದರೆ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿದ್ದರಿಂದ ಪಂದ್ಯ ಕೊನೆ ಓವರ್ ತನಕ ಕುತೂಹಲದಾಯಕವಾಗಿತ್ತು.
ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರೂ, ಅಕ್ಸರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟವಾಡಿದರು. ಕೊನೆ ಹಂತದಲ್ಲಿ ರವೀಂದ್ರ ಜಡೇಜಾ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಭಾರತಕ್ಕೆ ರೋಚಕ ಜಯ ತಂದುಕೊಟ್ಟರು.