
ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ , ಭಾರತ ಸರ್ಕಾರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಈ ಚಾನೆಲ್‌ಗಳು ಭಾರತ, ಅದರ ಸೇನೆ ಮತ್ತು ಭದ್ರತಾ ಸಂಸ್ಥೆಗಳ ವಿರುದ್ಧ ಪ್ರಚೋದನಕಾರಿ ವಿಷಯಗಳು ಮತ್ತು ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುತ್ತಿದ್ದರು ಎಂದು ಸೂಚಿಸಲಾಗಿದೆ.
ನಿಷೇಧಿಸಲಾದ ಚಾನೆಲ್‌ಗಳ ಪೈಕಿ ಡಾನ್ ನ್ಯೂಸ್, ಸಮಾ ಟಿವಿ, ಎಆರ್ವೈ ನ್ಯೂಸ್, ಜಿಯೋ ನ್ಯೂಸ್ ಸೇರಿದಂತೆ ಇನ್ನೂ ಹಲವಾರು ಪಾಕಿಸ್ತಾನಿ ಚಾನೆಲ್‌ಗಳು ಸೇರಿವೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.