ಪಾಕ್ ಪರ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ ಅರೆಸ್ಟ್!

Date:

spot_img

ದೆಹಲಿ : ಭಾರತದ ನೌಕಾಪಡೆಯ ಪ್ರಮುಖ ಕಚೇರಿಯಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ನೌಕಾ ಸಿಬ್ಬಂದಿಯೊಬ್ಬನನ್ನು ರಾಜಸ್ಥಾನ ಪೊಲೀಸರು ದೆಹಲಿಯಲ್ಲಿ ಬಂಧಿಸಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.

ಬಂಧಿತನನ್ನು ಹರಿಯಾಣ ಮೂಲದ ವಿಶಾಲ್ ಯಾದವ್ ಎಂದು ಗುರುತಿಸಲಾಗಿದೆ. ಈತ ನೌಕಾಪಡೆಯ ಕೇಂದ್ರ ಕಚೇರಿಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದನು. ಅಧಿಕಾರಿಗಳ ಪ್ರಕಾರ, ಈತ ಹಲವು ವರ್ಷಗಳಿಂದ “ಪ್ರಿಯಾ ಶರ್ಮಾ” ಎಂದು ಗುರುತಿಸಿಕೊಂಡಿದ್ದ ಪಾಕಿಸ್ತಾನದ ಐಎಸ್‌ಐ ಏಜೆಂಟ್ ಮಹಿಳೆಗೆ ಮಾಹಿತಿ ಲೀಕ್ ಮಾಡುತ್ತಿದ್ದನು. ಈ ಮಾಹಿತಿಗೆ ಪ್ರತಿಯಾಗಿ ಹಣವನ್ನು ಪಡೆದುಕೊಂಡಿದ್ದನು ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ.

“ಆಪರೇಷನ್ ಸಿಂಧೂರ” ಸೇರಿದಂತೆ ಹಲವಾರು ಕಾರ್ಯಾಚರಣೆಗಳ ರಹಸ್ಯ ಮಾಹಿತಿ ಯಾದವ್ ಹಂಚಿಕೊಂಡಿದ್ದನು. ಈ ಆರೋಪದ ಬಗ್ಗೆ ಭದ್ರತಾ ಸಂಸ್ಥೆಗಳು ವಿಶಾಲ್‌ನ ಮೊಬೈಲ್ ಪರಿಶೀಲಿಸಿದಾಗ ಸಾಕಷ್ಟು ಪುರಾವೆಗಳು ಲಭಿಸಿವೆ. ಸಾಮಾಜಿಕ ಮಾಧ್ಯಮದ ಮೂಲಕ ಈ ಸಂಪರ್ಕ ನಡೆದಿದ್ದು, ಅದು ಐಎಸ್‌ಐಯ ತಂತ್ರದ ಭಾಗವಾಗಿ ಪರಿಣಮಿಸಿದೆ.

ಈ ಕುರಿತು ವಿವರಣೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ವಿಷ್ಣುಕಾಂತ್ ಗುಪ್ತಾ, “ಸಾಮಾಜಿಕ ಜಾಲತಾಣಗಳನ್ನು ಬಳಸಿ ಐಎಸ್‌ಐ ಕಾರ್ಯಕರ್ತರು ಭಾರತೀಯ ಸಿಬ್ಬಂದಿಗಳನ್ನು ಬಲೆಗೆ ಬೀಳಿಸುತ್ತಿದ್ದಾರೆ. ಯಾವುದೇ ಅನುಮಾನಾಸ್ಪದ ಸಂಪರ್ಕದ ಬಗ್ಗೆ ಸಾರ್ವಜನಿಕರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ತಿಳಿಸಿದ್ದಾರೆ.

ಈ ಹಿಂದೆ ಕೂಡ ಜ್ಯೋತಿ ಮಲ್ಲೋತ್ರಾ ಎಂಬ ಯೂಟ್ಯೂಬರ್‌ ರನ್ನು ಈ ರೀತಿಯ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಚೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಚೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ