ಇಂಡಿಗೋ ವಿಮಾನದ ಪೈಲಟ್ ನ ಸಮಯಪ್ರಜ್ಞೆ: ಪಾಟ್ನಾ ವಿಮಾನ ನಿಲ್ದಾಣದಲ್ಲಿ ‘ತುರ್ತು ಟೇಕಾಫ್’, ನಂತರ ಸುರಕ್ಷಿತ ಲ್ಯಾಂಡಿಂಗ್!

Date:

spot_img

ಪಾಟ್ನಾ : ಮಂಗಳವಾರ ರಾತ್ರಿ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನ (ಸಂಖ್ಯೆ 6E 2482) ಭಾರೀ ಅಪಾಯದಿಂದ ಪಾರಾಗಿ ಇಳಿದಿದೆ. ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ರನ್‌ವೇಯಲ್ಲಿ ನಿಗದಿಪಡಿಸಿದ ಟಚ್‌ಡೌನ್ ಪಾಯಿಂಟ್‌ನಿಂದ ಸ್ವಲ್ಪ ಮುಂದೆ ಸಾಗಿತ್ತು. ಉಳಿದ ರನ್‌ವೇ ವಿಮಾನ ನಿಲುಗಡೆಗೆ ಸುರಕ್ಷಿತವಲ್ಲ ಎಂದು ಅರಿತ ತಕ್ಷಣವೇ ಪೈಲಟ್ ಮತ್ತೆ ವಿಮಾನವನ್ನು ಟೇಕ್‌ಆಫ್ ಮಾಡಿದ್ದಾರೆ.

ನಂತರ ವಿಮಾನವು ಪಾಟ್ನಾ ಆಕಾಶದಲ್ಲಿ ಸುಮಾರು ಮೂರು ಸುತ್ತು ಹಾರಾಡಿ, ರಾತ್ರಿ 9 ಗಂಟೆಗೆ ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ 173 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಸಮಯೋಚಿತವಾಗಿ ಕಾರ್ಯನಿರ್ವಹಿಸಿದ ಪೈಲಟ್‌ನ ಚಾಣಾಕ್ಷತೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಘಟನೆ ಇನ್ನೊಂದು ದೊಡ್ಡ ದುರಂತವನ್ನು ತಪ್ಪಿಸಿದೆ ಎಂದು ನಾಗರಿಕ ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.