spot_img

ಬ್ಲಾಕ್ ಕಾಂಗ್ರೆಸ್ ಕಾರ್ಕಳ ಅಲ್ಪಸಂಖ್ಯಾತ ಘಟಕದ ವತಿಯಿಂದ ಮಾಹಿತಿ ಕಾರ್ಯಗಾರ

Date:

spot_img

ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಕಾರ್ಕಳ ಅಲ್ಪಸಂಖ್ಯಾತ ಘಟಕದ ಆಶ್ರಯದಲ್ಲಿ ವಿವಿಧ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜಾಮೀಯ ಶಾದಿ ಮಹಲ್ ಸಾಲ್ಮರ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಶೆಟ್ಟಿಯವರು ಮಾತನಾಡಿ ರಾಜ್ಯ ಕಾಂಗ್ರೆಸ್ ಸಿದ್ದರಾಮಯ್ಯ ಸರಕಾರವು ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಅನೇಕ ಉತ್ತಮ ಯೋಜನೆಯನ್ನು ಜಾರಿಗೆ ತಂದು ಕೋಟ್ಯಾಂತರ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸುತ್ತಿದೆ. ಅಲ್ಪಸಂಖ್ಯಾತ ಬಂದುಗಳು ಜಾರಿಯಾದ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಬ್ಲಾಕ್ ಅಧ್ಯಕ್ಷ ಶುಭದರಾವ್ ರವರು ಮಾತನಾಡಿ ಅಲ್ಪಸಂಖ್ಯಾತರಿಗೆ ಇಲಾಖೆಯ ವತಿಯಿಂದ ಸಿಗುವ ಎಲ್ಲಾ ಸೌಲಭ್ಯಗಳು ಮತ್ತು ಬಿಡುಗಡೆಯಾಗುವ ಅನುದಾನಗಳು ಸರಿಯಾಗಿ ಬಳಕೆಯಾಗಬೇಕಾದರೆ ಅವುಗಳ ಬಗ್ಗೆ ಸೂಕ್ತ ಮಾಹಿತಿಯ ಅಗತ್ಯವಿದೆ , ಮಾಹಿತಿ ಕೊರತೆಯಿಂದ ಅನುದಾನಗಳು ಸರಕಾರಕ್ಕೆ ಹಿಂದೆ ಹೋಗುವ ಪ್ರಕರಣಗಳನ್ನು ನೋಡಿದ್ದೇವೆ. ಹಾಗಾಗಿ ಈ ಮಾಹಿತಿ ಕಾರ್ಯಗಾರವನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಅಲ್ಪಸಂಖ್ಯಾತ ಮುಖಂಡರಾದ‌ ಎಂ.ಪಿ ಮೊಹಿದ್ದೀನ್ ,ಪುರಸಭಾ ಸದಸ್ಯ ಜಮಾತ್ ಅಧ್ಯಕ್ಷರಾದ ಆಶ್ಪಕ್ ಆಹಮ್ಮದ್, ಕಾನೂನು ಘಟಕದ ಅಧ್ಯಕ್ಷರಾದ ರೆಹಮ್ಮತ್ತುಲ್ಲಾ, ಬ್ಲಾಕ್ ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲೀನೊ, ಸೊಲೊಮನ್ ಅಲ್ವಾರಿಸ್, ಸಂದರ್ಭೋಚಿತ ಮಾತುಗಳನ್ನಾಡಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಿಬ್ಬಂದಿ ದೀಪಾ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ಸಂವಾದವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಅಧ್ಯಕ್ಷ ವಲೇರಿಯನ್ ಪಾಯಸ್, ಸೇವಾದಳದ ಅಧಕ್ಷ ಅಬ್ದುಲ್ಲಾ ಸಾಣೂರು, NNO ಮೇಲ್ವಿಚಾರಕ ಫರ್ಮನ್ ಉಪಸ್ಥಿತರಿದ್ದರು.

ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬಿರ್ ಮಿಯಾರು ಕಾರ್ಯಕ್ರಮವನ್ನು ನಿರೂಪಿಸಿದರು, ಮುಡಾರು ಗ್ರಾಮಿಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಥ್ವಿರಾಜ್ ಜೈನ್ ಸ್ವಾಗತಿಸಿ, ಯುವ ಕಾಂಗ್ರೆಸ್ ಅಧ್ಯಕ್ಷ ಅತ್ತೂರು ಮಲ್ಲಿಕ್ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಗಳೂರಲ್ಲಿ ಹೆಬ್ಬಾವು ಮಾರಾಟ ಜಾಲ ಭೇದಿಸಿದ ಅರಣ್ಯ ಇಲಾಖೆ: 4 ಆರೋಪಿಗಳ ಬಂಧನ

ಖಚಿತ ಮಾಹಿತಿ ಆಧರಿಸಿ ಮಂಗಳೂರಿನಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹೆಬ್ಬಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

₹200 ಕೋಟಿ ವಂಚನೆ: ‘ಮದ್ಯದ ದೊರೆ’ ರೋಹನ್ ಸಲ್ಡಾನಾ ಅಂದರ್!

ಕೋಟ್ಯಂತರ ರೂಪಾಯಿ ಸಾಲದ ಆಮಿಷವೊಡ್ಡಿ ದೇಶಾದ್ಯಂತದ ಉದ್ಯಮಿಗಳಿಗೆ ಸುಮಾರು ₹200 ಕೋಟಿಗೂ ಅಧಿಕ ಹಣ ವಂಚಿಸಿದ್ದ ಕುಖ್ಯಾತ ವಂಚಕ ರೋಹನ್ ಸಲ್ಡಾನಾನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅಮರನಾಥ ಯಾತ್ರೆಗೆ ಅಡ್ಡಿಯಾದ ಭೂಕುಸಿತ: ಓರ್ವ ಸಾವು, ಮೂವರಿಗೆ ಗಾಯ, ಯಾತ್ರೆ ತಾತ್ಕಾಲಿಕ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಪವಿತ್ರ ಅಮರನಾಥ ಯಾತ್ರೆಯ ಮಾರ್ಗದಲ್ಲಿ ಭೂಕುಸಿತಕ್ಕೆ ಕಾರಣವಾಗಿದ್ದು, ದುರದೃಷ್ಟವಶಾತ್ ಓರ್ವ ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಹಿರಿಯಡಕ: ಅನಾರೋಗ್ಯದಿಂದ ಜಿಗುಪ್ಸೆಗೊಂಡ ಮಹಿಳೆ ನೇಣಿಗೆ ಶರಣು

ಕಳೆದ ಬುಧವಾರ, ಜುಲೈ 16, 2025ರ ರಾತ್ರಿ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 44 ವರ್ಷ ವಯಸ್ಸಿನ ರೇಖಾ ಎಂಬುವವರು ತಮ್ಮ ಮನೆಯ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.