
ಕಾರ್ಕಳ: ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದ ವತಿಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ನಾಳೆ (ಮಂಗಳವಾರ, ಜುಲೈ 8, 2025) ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಅಲ್ಪಸಂಖ್ಯಾತ ಘಟಕದ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ನಾಳೆ ಬೆಳಿಗ್ಗೆ 10:30ಕ್ಕೆ ಶಾದಿ ಮಹಲ್ ಜಾಮೀಯಾ ಮಸೀದಿ ಸಭಾಂಗಣದಲ್ಲಿ ಜರುಗಲಿದೆ. ಅಲ್ಪಸಂಖ್ಯಾತ ಇಲಾಖೆಯಿಂದ ದೊರೆಯುವ ಯೋಜನೆಗಳು ಮತ್ತು ಅವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತು ಈ ಕಾರ್ಯಾಗಾರದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುವುದು.
ಅಲ್ಪಸಂಖ್ಯಾತ ಸಮುದಾಯದ ಬಾಂಧವರು ಈ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಸದುಪಯೋಗ ಪಡೆದುಕೊಳ್ಳಬೇಕಾಗಿ ಬ್ಲಾಕ್ ಕಾಂಗ್ರೆಸ್ ಕಾರ್ಕಳದ ಅಧ್ಯಕ್ಷರಾದ ಶುಭದರಾವ್ ಮತ್ತು ಬ್ಲಾಕ್ ಅಲ್ಪಸಂಖ್ಯಾತ ಘಟಕ ಕಾರ್ಕಳದ ಅಧ್ಯಕ್ಷರಾದ ಶೇಖ್ ಶಬ್ಬೀರ್ ಮಿಯಾರು ವಿನಂತಿಸಿಕೊಂಡಿದ್ದಾರೆ.