
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜನವರಿ.13 ರಿಂದ ಮಹಾ ಕುಂಭಮೇಳ ಆರಂಭಗೊಂಡಿದ್ದು,ಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದದ ಮೇಲೆ ಪೊಲೀಸ್ ಪೇದೆಯೊಬ್ಬ ಬೂದಿ ಎರಚಿರುವ ಅಮಾನವೀಯ ಕೃತ್ಯ ನಡೆದಿದೆ. ಈ ಘಟನೆ ಅಲ್ಲಿದ್ದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಕೂಡಲೇ ಒಬ್ಬ ವ್ಯಕ್ತಿ ಮೊಬೈಲ್‌ನಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.
ಈ ಘಟನೆಗೆ ತಕ್ಷಣ ಸ್ಪಂದಿಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಸಂಬಂಧಪಟ್ಟ ಪೊಲೀಸ್ ಪೇದೆಯನ್ನು ಅಮಾನತುಗೊಳಿಸುವ ಕ್ರಮ ಕೈಗೊಂಡಿದ್ದಾರೆ. ಜೊತೆಗೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.