ವಿಶ್ವ ಯೋಗ ದಿನ ಜೂನ್ 21 ರ ರಹಸ್ಯ

Date:

spot_img

ಮತ್ತೊಮ್ಮೆ ವಿಶ್ವ ಯೋಗ ದಿನಾಚರಣೆ ಬಂದಿದೆ ಈ ದಿನ ಅತ್ಯಂತ ಶ್ರೇಷ್ಠವಾದ ದಿನ ಜೂನ್‌ 21 ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾತಿ ದಿನವೆಂದು ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ.

ದಕ್ಷಿಣ ಯಾನವನ್ನು ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ಧೀವ್ಯ ಶಕ್ತಿ ಉದ್ದೀಪನಗೊಳಿಸುತ್ತದೆ ಎಂದು ಈ ದಿನವನ್ನು ನಂಬಲಾಗಿದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ
ನಂಬಿಕೆಯಿದೆ. ಬೇಸಿಗೆ ಆಯನ ಸಂಕ್ರಾತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ.

ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ಭಾರತೀಯರಿಗೆ ಪ್ರಕೃತಿಗೆ ಗೌರವ ಸಲ್ಲಿಸುವುದು, ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಹಾಗೆಯೇ ಪ್ರಕೃತಿಯ ಕೊಡುಗೆಯನ್ನು, ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ ಎಂದು ಹೇಳಿದ್ದನ್ನು ನಾವು ನೆನಪಿಸಬಹುದು.
ಈ ದಿನದಂದು ಯೋಗವನ್ನು ಅಭ್ಯಾಸಸುವ ಮೂಲಕ ನಮ್ಮ ಆರೋಗ್ಯ ಜೊತೆಗೆ ಮನಸ್ಸನ್ನು ಉತ್ತಮಗೊಳಿಸಬಹುದಾಗಿದೆ.

ಯೋಗದ ಗುರಿ :-

ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ.
ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಾಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಸಾಮಾಜಿಕ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ.

ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ. ಈ ವರ್ಷದ ಅಧಿಕೃತ ಥೀಮ್ “ಆರೋಗ್ಯಕರ ವೃದ್ಧಿಗಾಗಿ ಯೋಗ” (Yoga for Healthy Ageing) ಎಂಬುದಾಗಿದೆ. ವಯಸ್ಸಾಗುತ್ತಿದ್ದಂತೆ ಜನರು ದೈಹಿಕ ನಮ್ಯತೆ, ಮಾನಸಿಕ ನೆಮ್ಮದಿ ಮತ್ತು ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಲು ಯೋಗ ಹೇಗೆ ಸಹಕಾರಿಯಾಗಿದೆ ಎಂಬುದನ್ನು ಈ ಧ್ಯೇಯ ವಾಕ್ಯ ತಿಳಿಸುತ್ತದೆ.

ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಲಿ :-
ವರ್ಷದಲ್ಲಿ ಒಂದು ದಿನ ಯೋಗ ಮಾಡಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟರೆ ಸಾಲದು ಬದಲಾಗಿ ಪ್ರತಿದಿನವೂ ಯೋಗ ದಿನವಾಗಬೇಕು ನಮ್ಮ ದಿನದಲ್ಲಿ ಕನಿಷ್ಠ ಒಂದು ಗಂಟೆಯನ್ನು ಯುವಕವಾಗಿ ನೀಡಿದ್ದಲ್ಲಿ ನಮ್ಮ ಆರೋಗ್ಯ (ಮಾನಸಿಕ ಮತ್ತು ಭೌತಿಕ ) ವನ್ನು ಉತ್ತಮವಾಗಿಸಬಹುದು.
ಹೀಗಾಗಿ ಈ ವರ್ಷದ ಯೋಗ ದಿನದಲ್ಲಿ ನಾವೆಲ್ಲರೂ ಸಂಕಲ್ಪ ಮಾಡೋಣ ಪ್ರತಿದಿನ ಯೋಗ ನಮ್ಮ ಜೀವನದ ಭಾಗವಾಗಲಿ.


✍🏼
ರಾಘವೇಂದ್ರ ಪ್ರಭು ಕರ್ವಾಲು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮೇಲ್ಮನೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದು ನಾನಲ್ಲ:ದೇವರ ಮೇಲೆ ಆಣೆ-ಪ್ರಮಾಣಕ್ಕೂ ಸಿದ್ಧರಾದ ಬಿಜೆಪಿ ಶಾಸಕರು

ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಹಿನ್ನೆಲೆಯಲ್ಲಿ ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಶಾಸಕರು ದೇವರ ಮೇಲೆ ಆಣೆ ಮಾಡುತ್ತಿರುವ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮುದ್ರಾಡಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನದ ಸಂಭ್ರಮ

ಹೆಬ್ರಿ ತಾಲೂಕಿನ ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ಜೂನ್ 21 ರ ವಿಶ್ವ ಯೋಗ ದಿನವನ್ನು ಆಚರಿಸಲಾದ ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ದಿಢೀರ್ ಏರುಪೇರು !

ಸ್ಯಾಂಡಲ್‌ವುಡ್ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಾಗರಭಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಜ್ಯಾದ್ಯಂತ ಇಂದು ಭಾರಿ ಭದ್ರತೆಯಲ್ಲಿ ನೀಟ್ ಮರುಪರೀಕ್ಷೆ ಆರಂಭ: ಹಿಜಾಬ್ ಹಾಗೂ ಪೇಟಾ ಧರಿಸಲು ಅನುಮತಿ !

ರಾಜ್ಯಾದ್ಯಂತ ಜೂನ್ 21 ರ ನೀಟ್ ಮರುಪರೀಕ್ಷೆಗೆ ಸಿಆರ್‌ಪಿಎಫ್ ಭದ್ರತೆ ಕಲ್ಪಿಸಲಾಗಿದ್ದು, ಹಿಜಾಬ್ ಹಾಗೂ ಪೇಟಾ ಧರಿಸಲು ಅನುಮತಿ ನೀಡಲಾದ ಪೂರ್ಣ ಮಾಹಿತಿ ಇಲ್ಲಿದೆ ಓದಿ