spot_img

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

spot_img

ಉಡುಪಿ : ಅತ್ಯಂತ ಪ್ರಸಿದ್ಧವಾದ ಉಡುಪಿಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವದ ವೈಭವವನ್ನು ವಿವಿಧ ಸ್ಪರ್ಧೆ, ಭಜನಾ ಕಮ್ಮಟ, ಧಾರ್ಮಿಕ ಪ್ರವಚನ, ವಿಚಾರ ಸಂಕಿರಣ ಮುಂತಾದ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ 48 ದಿನಗಳ ಕಾಲ ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲು ಪೂಜ್ಯ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಶ್ರೀಕೃಷ್ಣ ಮಠದ ಆಡಳಿತ ಮಂಡಳಿಯು ನಿರ್ಧರಿಸಿದೆ.

ಈ ವೈಶಿಷ್ಟ್ಯಪೂರ್ಣ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ಪೂಜ್ಯ ಪರ್ಯಾಯ ಶ್ರೀಪಾದರು ಗೀತಾಮಂದಿರದಲ್ಲಿ ಬಿಡುಗಡೆಗೊಳಿಸಿದರು.

​ಈ ಸಂದರ್ಭದಲ್ಲಿ ದಿವಾನರಾದ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ, ರಮೇಶ್ ಭಟ್, ಕೃಷ್ಣಪ್ರಸಾದ್, ರಮಣಾಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಈ ಮಂಡಲೋತ್ಸವ ಸಮಿತಿಯು ಮಾನ್ಯ ಶಾಸಕರಾದ ಶ್ರೀ ಯಶಪಾಲ್ ಸುವರ್ಣರವರ ಗೌರವಾಧ್ಯಕ್ಷತೆಯಲ್ಲಿ ನಡೆಯಲಿದ್ದು, ಉತ್ಸವದ ಕಾರ್ಯಕ್ರಮಗಳನ್ನು ಕರ್ನಾಟಕ ಸರಕಾರದ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೊಟ್ ರವರು ಈ ತಿಂಗಳ 25 ಶುಕ್ರವಾರದಂದು ಉದ್ಘಾಟಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಲಂಬಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ

ಶಿರೂರು ಮಠದ ಭಾವಿ ಪರ್ಯಾಯ ಶ್ರೀ ವೇದವರ್ಧನ ತೀರ್ಥರಿಗೆ ಬ್ರಾಹ್ಮಣ ಮಹಾಸಭಾದಿಂದ ಫಲ ಕಾಣಿಕೆ ಅರ್ಪಣೆ

ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.

ಬಿಜೆಪಿ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣಕ್ಕೆ ಮರುಜೀವ, ಹಣ ಬಿಡುಗಡೆಗೆ ಉದ್ಯಮಿ ಹೈಕೋರ್ಟ್ ಮೊರೆ

ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.