
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ತೀವ್ರ ತೊಂದರೆಯಾಗಿದೆ. ಚಳಿಯಿಂದಾಗಿ ದರ್ಶನ್‌ಗೆ ಕಷ್ಟವಾಗುತ್ತಿದ್ದು, ದಿಂಬು ಮತ್ತು ಹಾಸಿಗೆಗಾಗಿ ವಕೀಲರ ಮೂಲಕ 57ನೇ ಸಿಸಿಎಚ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ದರ್ಶನ್‌ಗೆ ಕನಿಷ್ಠ ಸೌಲಭ್ಯಗಳಾದ ದಿಂಬು ಮತ್ತು ಹಾಸಿಗೆಯನ್ನು ಒದಗಿಸುವಂತೆ ಜೈಲಧಿಕಾರಿಗಳಿಗೆ ಆದೇಶ ನೀಡಿತ್ತು. ಆದರೆ, ನ್ಯಾಯಾಲಯದ ಆದೇಶದ ಹೊರತಾಗಿಯೂ ಜೈಲಧಿಕಾರಿಗಳು ಯಾವುದೇ ಸೌಲಭ್ಯಗಳನ್ನು ನೀಡಿಲ್ಲ ಎಂದು ದರ್ಶನ್ ಪರ ವಕೀಲರು ಇದೀಗ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಜೈಲಿನಲ್ಲಿ ದರ್ಶನ್ ಅನುಭವಿಸುತ್ತಿರುವ ಯಾತನೆ ಕುರಿತು ವಕೀಲರು ಕೋರ್ಟ್‌ಗೆ ತಿಳಿಸಿದ್ದು, ತಕ್ಷಣವೇ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.



































